Top

ಕಿಮ್ಸ್ ವೈದ್ಯರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

ಖಾಸಗಿ ಆಸ್ಪತ್ರೆಗಳಿಗೆ ತೆರಳುವ ವೈದ್ಯರನ್ನ ಅಮಾನತು ಮಾಡುವಂತೆ ಸೂಚನೆ

ಕಿಮ್ಸ್ ವೈದ್ಯರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ
X

ಹುಬ್ಬಳ್ಳಿ: ಕೋವಿಡ್​ ಸಮಯದಲ್ಲೂ ಸರಿಯಾಗಿ ಕರ್ತವ್ಯ ನಿರ್ವಹಿಸಿದ ಕಿಮ್ಸ್​ ಆಸ್ಪತ್ರೆ ವೈದ್ಯರ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಹುಬ್ಬಳ್ಳಿಯ ಗ್ಲಾಸ್​ಹೌಸ್​​ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕೇವಲ ಹಾಜರಿ ಹಾಕಿ ತಮ್ಮ ಖಾಸಗಿ ಆಸ್ಪತ್ರೆಗಳಿಗೆ ತೆರಳೋ ವೈದ್ಯರನ್ನ ಅಮಾನತ್ತು ಮಾಡಿ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ‌ 960 ಜನ ವೈದ್ಯರಿದ್ದರೂ ಕೆಲಸ ಸರಿಯಾಗಿ ಆಗುತ್ತಿಲ್ಲ. ಪ್ರತಿ ತಿಂಗಳು ಮೂರು ಲಕ್ಷ ವೇತನ ತೆಗೆದುಕೊಂಡರೂ ಕರ್ತವ್ಯ ನಿಷ್ಠೆ ಮರೆಯುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಯಲ್ಲಿ ಸಕಲ ವ್ಯವಸ್ಥೆ ಇದ್ದರೂ ವೈದ್ಯರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಸರಿಯಾಗಿ ಕೆಲಸ ಮಾಡದ ವೈದ್ಯರನ್ನ ಕೂಡಲೇ ಅಮಾನತು ಮಾಡಿ ಎಂದು ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Next Story

RELATED STORIES