Top

ಧಾರವಾಡದಲ್ಲಿ ಬೆಡ್ ಸಮಸ್ಯೆ ಇಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರದಿಂದ ರಾಜ್ಯಕ್ಕೆ ಎಲ್ಲಾ ರೀತಿಯ ಸಹಾಯಕ್ಕೆ ಸಿದ್ಧ

ಧಾರವಾಡದಲ್ಲಿ ಬೆಡ್ ಸಮಸ್ಯೆ ಇಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
X

ಧಾರವಾಡ: ಹುಬ್ಬಳ್ಳಿಯ ಕಿಮ್ಸ್​ನಲ್ಲಿ 300 ಬೆಡ್, ಧಾರವಾಡದಲ್ಲಿ 125 ಬೆಡ್​ಗಳನ್ನ ವ್ಯವಸ್ಥೆ ಮಾಡಿದ್ದೇವೆ. ಹೀಗಾಗಿ ಜಿಲ್ಲೆಯಲ್ಲಿ ಸದ್ಯ ಬೆಡ್​ ಸಮಸ್ಯೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ. ಜನ, ಜೀವನ ನಡೆಸಲು ತಾವೇ ಕಟ್ಟುನಿಟ್ಟನ ನಿಯಮ ಹಾಕಿಕೊಳ್ಳಬೇಕು. ಕೊರೊನಾ ಸೋಂಕಿತರ ಚಿಕಿತ್ಸೆಗೆ ಭಾರತ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ನೀಡಿದೆ‌‌. ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧವಾಗಿದೆ‌ ಎಂದರು.

ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ತೊಂದರೆಯಾಗದಂತೆ‌ ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರ ಸ್ಕಿಮ್ ಪ್ರಕಾರ ಬೆಡ್ ನೀಡಬೇಕು. ಈ ಬಗ್ಗೆ ಮಾತುಕತೆ ಕೂಡಾ ಮಾಡಿದ್ದೇವೆ. ಹೀಗಾಗೇ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ಬೆಡ್ ಸಮಸ್ಯೆ ಇಲ್ಲ. ನಮ್ಮಲ್ಲಿ ಜಿಲ್ಲಾಡಳಿತ ಅಚ್ಚುಕಟ್ಟಾಗಿ ಕೆಲಸ ಮಾಡುತ್ತಿದೆ ಎಂದರು.

Next Story

RELATED STORIES