Top

ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿದೆ - ಹೆಚ್​ ವಿಶ್ವನಾಥ್

ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ, ಮಾತು ತಪ್ಪಿದ ನಾಯಕ

ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿದೆ - ಹೆಚ್​ ವಿಶ್ವನಾಥ್
X

ಹುಬ್ಬಳ್ಳಿ-ಧಾರವಾಡ: ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಬೇಡಿಕೆ ಇದೆ ಇದಕ್ಕಾಗಿ ಕಾಗಿನೆಲೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆ ಹಿನ್ನೆಲೆ ಜನರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ವಿಧಾನಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್ ಅವರು ಹೇಳಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೀಸಲಾತಿ ಹೋರಾಟ ಬೇಡ ಅಂತೀದಾರೆ. ವೀರಶೈವ ಲಿಂಗಾಯತ ಮುಖ್ಯಮಂತ್ರಿಗಳು ಇದ್ಯಾಗೂ 2ಎ ಸೇರಿಸುವಂತೆ ಹೋರಾಟ ನಡೆಸಿದ್ದಾರೆ. ಮೀಸಲಾತಿ ಪಡೆಯಲು ಹೋರಾಟ ನಡೆಸಲೆಬೇಕು. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಯಾಕೆ ಮೀಸಲಾತಿ ಬಗ್ಗೆ ಯೋಚಿಸಲ್ಲ. ಈಶ್ವರಪ್ಪ ಬೆಳೆದು ಬಿಡ್ತಾರೆ ಎಂಬ ಆತಂಕದಿಂದ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಏಕಚಕ್ರಾಧಿಪತಿ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸದ್ಯ 78 ವರ್ಷದ ಯಡಿಯೂರಪ್ಪ ಅಧಿಕಾರದ ವ್ಯಾಮೋಹ ಇರಬೇಕಾದ್ರೆ, 77 ವರ್ಷದ ನನಗೆ ಅಧಿಕಾರದ ವ್ಯಾಮೋಹ ಇದ್ದರೆ ತಪ್ಪೇನೂ(?) ನಾನು ಪಕ್ಷಾಂತರಿ ಅಲ್ಲ, ನಾಯಕತ್ವದ ವಿರುದ್ಧ ಧ್ವನಿ ಎತ್ತಿ ಪಕ್ಷ ಬದಲಿಸಿದ್ದೇನೆ. ನಾನು ಈ ಎಲ್ಲ ವಿಚಾರಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಯೋಚನೆಯಲ್ಲಿದ್ದೇನೆ. ಬಾಂಬೆ-ಡೇಸ್ ಪುಸ್ತಕದಲ್ಲಿ ಸರ್ಕಾರ ರಚನೆಯ ಪ್ರಹಸನದ ಬಗ್ಗೆ ಬರೆಯುತ್ತಿದ್ದೇನೆ. ಇನ್ನು ನಾಲ್ಕೈದು ಅಧ್ಯಾಯಗಳು ಬಾಕಿ ಇದೆ ಎಂದು ಹೇಳಿದರು.

ಇನ್ನು ಸಾರಾ ಮಹೇಶ್ ಕೊಚ್ಚೆಗುಂಡಿ. ಆ ಕೊಚ್ಚೆಗುಂಡಿಗೆ ಕಲ್ಲು ಎಸೆದು ನಾನೆ ಹೊಲಸು ಮಾಡ್ಕೊಳ್ಳಿ. ಕೇವಲ ತತ್ವದ ಸಿದ್ದಾಂತದಕ್ಕಾಗಿ ರಾಜಕೀಯ ಮಾಡಲು ಸಾದ್ಯವಿಲ್ಲ. ಅಧಿಕಾರದ ಆಸೆ ಇಲ್ಲ ಅಂತ ನಾನು ಹೇಳುತ್ತಿಲ್ಲ. ರಾಜಕೀಯದಲ್ಲಿ ಅಧಿಕಾರ ಇಲ್ಲದೆ ಏನೂ ಮಾಡಲು ಸಾಧ್ಯ(?) ಎಂದಿದ್ದಾರೆ.

ಮೋದಿ ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ. ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ. ಯಡಿಯೂರಪ್ಪ ಮಗ ವಿಜಯೇಂದ್ರ ಇಲ್ವಾ(?) ರಾಘವೇಂದ್ರ ಎಂಪಿ ಇದ್ದಾರೆ. ಯಡಿಯೂರಪ್ಪ ಕುಟುಂಬ ಹೆಣ್ಣುಮಕ್ಕಳು ರಾಜಕಾರಣದಲ್ಲಿ ಭಾಗಿಯಾಗುತ್ತಿಲ್ವಾ(?) ಈಶ್ವರಪ್ಪನ ಸಹ ಕುಟುಂಬ ರಾಜಕಾರಣದಿಂದ ಹೊರತಾಗಿಲ್ಲ. ಕುಟುಂಬ ರಾಜಕಾರಣವೇ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದು ಕುಟುಂಬ ರಾಜಕಾರಣ ಬಗ್ಗೆ ಟೀಕಿಸಿದ್ದಾರೆ.

ಅದುವಲ್ಲದೇ, ಅಮಿತ್ ಶಾ ಮಗನ ವಿಚಾರದಲ್ಲಿ ಮೋದಿ ಸಹ ಬೇಸರ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಕಾಮಧೇನು ಇದ್ದಂತೆ, 30 ವರ್ಷದಿಂದ ನೋಡುತ್ತಿದ್ದೇನೆ. ಯಡಿಯೂರಪ್ಪನವರ ಜೀವ ವಿಜಯೇಂದ್ರನ ಕೈಯಲ್ಲಿ ಇದೆ. ಬಾಲ ನಾಗಮ್ಮನ ಕಥೆಯಂತಾಗಿದೆ ಯಡಿಯೂರಪ್ಪ ಬದುಕು. ಇವತ್ತಿಗೂ ಯಡಿಯೂರಪ್ಪ ನವರ ಬಗ್ಗೆ ನನಗೆ ಕಳಕಳಿ ಇದೆ. ಯಡಿಯೂರಪ್ಪ ನಾಲಿಗೆ ಕಳೆದುಕೊಂಡ ನಾಯಕ, ಮಾತು ತಪ್ಪಿದ ನಾಯಕ ಎಂದು ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್ ಅವರು ಸಿಎಂ ಬಿಎಸ್​ವೈ ಅವರನ್ನು ಜರಿದಿದ್ದಾರೆ.

Next Story

RELATED STORIES