Top

ಭಾರೀ ಮಳೆ: ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕುಸಿತ

ನಿರಂತರ ಮಳೆಗೆ ಜನ ಜೀವನ ಅಸ್ತವ್ಯಸ್ತ

ಭಾರೀ ಮಳೆ: ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕುಸಿತ
X

ಹಾಸನ: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಕುಸಿತಗೊಂಡಿದೆ.

ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಹಾಗೂ ಮಂಗಳೂರು ಸಂಪರ್ಕ ರಸ್ತೆಯಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ. ಸದ್ಯ ಈ ಮಾರ್ಗದಲ್ಲಿ ಘನ ವಾಹನ ಸಂಚಾರ ಬಂದ್​ ಆಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದ ಮೊರೆ ಹೋಗಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ರಸ್ತೆ ಸರಿಪಡಿಸುವ ಕಾರ್ಯಾಚರಣೆ ಆರಂಭಗೊಂಡಿದೆ.

Next Story

RELATED STORIES