Top

ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುವುದು DC ಜವಾಬ್ದಾರಿ-ರೋಹಿಣಿ ಸಿಂಧೂರಿ

ಚಾಮರಾಜನಗರ ಡಿಸಿ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಗರಂ

ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುವುದು DC ಜವಾಬ್ದಾರಿ-ರೋಹಿಣಿ ಸಿಂಧೂರಿ
X

ಮೈಸೂರು: ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಡಿಸಿ ಎಂ.ಆರ್​ ರವಿ ಹೇಳಿಕೆಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿವ ರೋಹಿಣಿ ಸಿಂಧೂರಿ, ಆಕ್ಸಿಜನ್ ಸಪ್ಲೈ ವಿಚಾರದಲ್ಲಿ ಚಾಮರಾಜನಗರ ಡಿಸಿ ಸುಳ್ಳು ಆರೋಪ ಮಾಡಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿ ಆರೋಪ ಮಾಡಿದ್ದಾರೆ. ಮೈಸೂರು ಡಿಸಿಯಾಗಿರುವ ನಾನು ಚಾಮರಾಜನಗರಕ್ಕಾಗಲಿ ಅಥವಾ ಇನ್ಯಾವುದೆ ಜಿಲ್ಲೆಗೆ ಆಕ್ಸಿಜನ್ ಸರಬರಾಜು ತಡೆದಿಲ್ಲ. ಯಾವುದೇ ಜಿಲ್ಲೆಗೆ ಆಕ್ಸಿಜನ್ ಸರಬರಾಜು ಅಲ್ಲಿನ ಸರಬರಾಜುದಾರರು ಹಾಗೂ ಜಿಲ್ಲಾಡಳಿತ ನಡುವಿನ ಸಂವಹನ ಇರುತ್ತೆ ಎಂದಿದ್ದಾರೆ.

ಮೈಸೂರಿಗೆ ಬಳ್ಳಾರಿಯಿಂದ ಕಡಿಮೆ ಆಕ್ಸಿಜನ್ ಸಪ್ಲೈ ಆದರೆ ನಾನು ಬಳ್ಳಾರಿ ಡಿಸಿಯನ್ನ ದೂಷಿಸಲು ಸಾಧ್ಯವಿಲ್ಲ. ತಮ್ಮ ಜಿಲ್ಲೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳೋದು ಅವರದ್ದೇ ಜವಾಬ್ದಾರಿ. ಅದು ಆಗದಿದ್ದರೆ ಮೇಲಧಿಕಾರಿಗಳಿಗೆ ಹೇಳಬೇಕು. ಅದರಲ್ಲಿ ವಿಫಲವಾಗಿರುವ ಚಾಮರಾಜನಗರದವರು ಈಗ ಮೈಸೂರಿನ ಮೇಲೆ ದೂಷಿಸುತ್ತಿದ್ದಾರೆ. ರಾಜ್ಯ ಸರ್ಕಾರ ಆದೇಶಿಸಿರುವ ವಿಚಾರಣೆಯಲ್ಲಿ ಇದೇಲ್ಲವು ಸಾಬೀತಾಗಲಿದೆ ಎಂದಿದ್ದಾರೆ.

ಇನ್ನು ಪತ್ರಿಕಾ ಹೇಳಿಕೆಯಲ್ಲಿ ಮೇ 2 ಮತ್ತು 3 ರಂದು ಚಾಮರಾಜನಗರಕ್ಕೆ ಕಳುಹಿಸಿದ ಆಕ್ಸಿಜನ್ ದಾಖಲೆ, ಸಮಯ ಹಾಗೂ ಬಿಲ್ ಸಂಖ್ಯೆಯ ಜೊತೆಗೆ ಮಾಹಿತಿ ನೀಡಿದ್ದಾರೆ.

Next Story

RELATED STORIES