Top

ನಾನು ಒಬ್ಬ ಮಹಿಳೆ ಇದ್ದೇನೆ ನನಗೂ ಸಹಕಾರ ಕೊಡಿ - ಶಾಸಕಿ ಅನಿತಾ ಕುಮಾರಸ್ವಾಮಿ

ನಾನು ರಾಜಕಾರಣ ಮಾಡಲು ಬಂದಿಲ್ಲ, ಸಮಾಜ ಸೇವೆ ಮಾಡಲು ಬಂದಿದ್ದೇನೆ

ನಾನು ಒಬ್ಬ ಮಹಿಳೆ ಇದ್ದೇನೆ ನನಗೂ ಸಹಕಾರ ಕೊಡಿ - ಶಾಸಕಿ ಅನಿತಾ ಕುಮಾರಸ್ವಾಮಿ
X

ರಾಮನಗರ: ನಾನು ರಾಜಕಾರಣ ಮಾಡಲು ಬಂದಿಲ್ಲ, ಸಮಾಜ ಸೇವೆ ಮಾಡಲು ಬಂದಿದ್ದೇನೆ ಎಂದು ರಾಮನಗರ ಜೆಡಿಎಸ್​ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ರಾಮನಗರದ ರಾಜೀವ್ ಗಾಂಧಿಪುರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜಕಾರಣದ ಸಮಯದಲ್ಲಿ ರಾಜಕೀಯ ಆದರೆ ಬಡವರ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ಕೊರೊನಾ ಸಂದರ್ಭದಲ್ಲಿ ನಾನು, ಪತಿ ಕುಮಾರಸ್ವಾಮಿ, ಮಗ ನಿಖಿಲ್ ಜೊತೆಗೆ ಸೊಸೆಯೂ ಬಂದಿದ್ದರು ಎಂದಿದ್ದಾರೆ.

ಇನ್ನು ಬಡವರಿಗೆ ಫುಡ್​ಕಿಟ್ ಜೊತೆಗೆ ಹೆಲ್ತ್ ಕಿಟ್ ಕೊಟ್ಟಿದ್ದೇವೆ. ರಾಮನಗರದ ಎಂಪಿಎಮ್​ಸಿ, ರೇಷ್ಮೆ ಮಾರ್ಕೆಟ್​ನಲ್ಲಿ ಸ್ಯಾನಿಟೈಜರ್ ಟನಲ್ ಹಾಕಿಸಿದ್ದೆವು. ಇಷ್ಟೆಲ್ಲಾ ಕೆಲಸ ಬೇರೆ ಯಾವ ತಾಲೂಕಿನಲ್ಲಿ ಆಗಿದೆ ಹೇಳಿ(?) ಸುಮ್ಮನೆ ನಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಒಬ್ಬ ಮಹಿಳೆ ಇದ್ದೇನೆ ನನಗೂ ಸಹಕಾರ ಕೊಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿಕೊಂಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರೆಲ್ಲರೂ ನಮ್ಮ ಮನೆಯವರು, ಯಾರು ಕೂಡ ಪಕ್ಷ ಬಿಡುವುದಿಲ್ಲ, ವಿಶ್ವಾಸವಿದೆ ಎಂದು ಅನಿತಾ ಕುಮಾರಸ್ವಾಮಿ ಅವರು ತಿಳಿಸಿದರು.

Next Story

RELATED STORIES