Top

ಪ್ರಾಧಿಕಾರಗಳಿಂದ ಸಮುದಾಯದ ಅಭಿವೃದ್ಧಿ ಆಗುತ್ತೆ ಅನ್ನೋ ನಂಬಿಕೆ ಇಲ್ಲ- ಹೆಚ್ಡಿಕೆ

ಬಡ ಜನರ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ. ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ

ಪ್ರಾಧಿಕಾರಗಳಿಂದ ಸಮುದಾಯದ ಅಭಿವೃದ್ಧಿ ಆಗುತ್ತೆ ಅನ್ನೋ ನಂಬಿಕೆ ಇಲ್ಲ- ಹೆಚ್ಡಿಕೆ
X

ರಾಮನಗರ: ಅಭಿವೃದ್ಧಿ ಪ್ರಾಧಿಕಾರಗಳಿಂದ ಸಮುದಾಯದ ಅಭಿವೃದ್ಧಿ ಆಗುತ್ತೆ ಅನ್ನೋ ನಂಬಿಕೆ ಇಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿಂದು ಮಾಧ್ಯಮ ಪ್ರತಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಜಾತಿಗಳಿಗೂ ಪ್ರಾಧಿಕಾರ ಮಾಡಿದರೆ, ರಾಜ್ಯದಲ್ಲಿ ಸಣ್ಣಪುಟ್ಟ ಅಂದ್ರೆ 560 ಜಾತಿಗಳಿವೆ. ಎಲ್ಲದಕ್ಕೂ ಪ್ರಾಧಿಕಾರ ಮಾಡಿದರೆ ಒಳ್ಳೆಯದಲ್ವಾ(?) ಎಂದರು.

ಇನ್ನು ವೀರಶೈವರ ಪ್ರಾಧಿಕಾರ ರಚನೆಯಾಗಿದೆ, ಒಕ್ಕಲಿಗರ ಪ್ರಾಧಿಕಾರದ ಬಗ್ಗೆ ಕೆಲವರು ಧ್ವನಿ ಎತ್ತಿದ್ದಾರೆ. ಆದರೆ, ನಾನು ಈ ವಿಚಾರಗಳಿಗೆ ತಲೆ ಹಾಕಲ್ಲ. ಬಡ ಜನರ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ. ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ ಎಂದು ಅವರು ಹೇಳಿದರು.

ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಆಗಿವೆ. ನವಲಗುಂದದಲ್ಲಿಯೂ ಕಾಂಗ್ರೆಸ್-ಬಿಜೆಪಿ ಮೈತ್ರಿ ಆಗಿವೆ. ಸ್ಥಳೀಯವಾಗಿ ಮೂರು ಪಕ್ಷದವರು ಹೊಂದಾಣಿಕೆ ಆಗುತ್ತಿದ್ದಾರೆ. ಜೆಡಿಎಸ್​ಗೆ ಬಿಜೆಪಿ ಬಗ್ಗೆ ಸಾಫ್ಟ್ ಅನ್ನುವ ವಿಚಾರ ಇಲ್ಲ. ಈಗ ಕೆಲವು ಬೈ ಎಲೆಕ್ಷನ್​ಗಳಿವೆ ಅಷ್ಟೇ. ಸಾರ್ವತ್ರಿಕ ಚುನಾವಣೆಗೆ ಇನ್ನು ಎರಡುವರೆ ವರ್ಷ ಕಾಯಬೇಕಿದೆ ಎಂದು ಹೆಚ್​.ಡಿ ಕುಮಾರಸ್ವಾಮಿ ಅವರು ಮಾತನಾಡಿದರು.

Next Story

RELATED STORIES