Top

ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ - ಸಿಎಂ ಬಿ.ಎಸ್​ ಯಡಿಯೂರಪ್ಪ

ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ

ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ - ಸಿಎಂ ಬಿ.ಎಸ್​ ಯಡಿಯೂರಪ್ಪ
X

ಶಿವಮೊಗ್ಗ: ರಾಜ್ಯದಲ್ಲಿ ಯಾವುದೇ ಒಬ್ಬ ವ್ಯಕ್ತಿಗೂ ನಿವೇಶನ, ಸೂರಿನ ಕೊರತೆಯಾಗಬಾರದು. ಫಲಾನುಭವಿಗಳಿಗೆ ನಿವೇಶನ ನೀಡಿ ಮನೆ ಕಟ್ಟಿಕೊಡಬೇಕೆಂಬ ಅಪೇಕ್ಷೆ ಹೊಂದಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿಂದು ವಿವಿಧ ಇಲಾಖೆ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಹಕ್ಕು ಪತ್ರ ತಲುಪಿಸಲಾಗುವುದು. ಯಾರಾದರೂ ಅಧಿಕಾರಿಗಳು ಲಂಚ ಕೇಳಿದರೆ, ಅವರ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಭಷ್ಟಾಚಾರ ನಡೆಯಬಾರದೆಂಬ ಉದ್ದೇಶ ನಮ್ಮದು ಎಂದಿದ್ದಾರೆ.

ಇನ್ನು ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ. ಸಮೀಕ್ಷೆಯ ಮೂಲಕ ನೆರೆ ಹಾನಿಯ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಿಳಿಸಿದರು.

Next Story

RELATED STORIES