Top

ನಾನು ಜಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ - ಸಚಿವ ಕೆ.ಎಸ್​ ಈಶ್ವರಪ್ಪ

ನಮ್ಮ ಸಮಸ್ಯೆಗಳನ್ನು ಕೆಲವೇ ದಿನದಲ್ಲಿ ಪರಿಹರಿಸುವ ಭರವಸೆಯನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೀಡಿದ್ದಾರೆ.

ನಾನು ಜಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ - ಸಚಿವ ಕೆ.ಎಸ್​ ಈಶ್ವರಪ್ಪ
X

ಶಿವಮೊಗ್ಗ: ಸಿದ್ದರಾಮಯ್ಯ ಅವರು ಅರ್ಜೆಂಟ್ ಆಗಿ ಮುಖ್ಯಮಂತ್ರಿಯಾಗಬೇಕು ಎಂದುಕೊಂಡಿದ್ದಾರೆ. ಜನ ಅವರನ್ನು ತಿರಸ್ಕರಿಸಿದ್ದಾರೆ ಎಂದು ಕೆ.ಎಸ್​ ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಯಡಿಯೂರಪ್ಪ ರಾಜೀನಾಮೆ ನೀಡಿದರೆ ನಾನು ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಯಾವ ಕಾರಣಕ್ಕೂ ಯಡಿಯೂರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವ ಆಗುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗುವ ಭ್ರಮೆ ಇಟ್ಟುಕೊಳ್ಳುವುದು ಬೇಡ ಎಂದಿದ್ದಾರೆ.

ಇನ್ನು ನಾನು ಬರೆದ ಪತ್ರ ಉಪಚುನಾವಣೆಯಲ್ಲಿ ವಿಪಕ್ಷಗಳಿಗೆ ಅಸ್ತ್ರ ಆಗುವುದಿಲ್ಲ. ಈ ವಿಷಯವಿಲ್ಲದಿದ್ದರೆ ಬೇರೆ ಅಸ್ತ್ರಗಳನ್ನು ವಿಪಕ್ಷಗಳು ಹುಡುಕುತ್ತಿದ್ದವು. ಉಪಚುನಾವಣೆ ನಡೆಯುವ ಕ್ಷೇತ್ರಗಳ ಮನೆಗಳಿಗೂ ತೆರಳಿ ಮತದಾರರ ಮನವೊಲಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ ಈ ಬಗ್ಗೆ ವಿಪಕ್ಷಗಳಿಗೆ ಅರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ನಾನು ಬರೆದ ಪತ್ರವನ್ನು ಇಟ್ಟುಕೊಂಡು ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿವೆ. ನಮ್ಮಲ್ಲಿರುವ ಆಡಳಿತಾತ್ಮಕ ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ಳುತ್ತಿದ್ದೇವೆ. ವಿಪಕ್ಷಗಳಿಗೆ ಈ ವಿಷಯದಲ್ಲಿ ಹುಳುಕು ಸಿಗುವುದಿಲ್ಲ ಬೆಳಕೂ ಸಿಗುವುದಿಲ್ಲ. ನಮ್ಮ ಸಮಸ್ಯೆಗಳನ್ನು ಕೆಲವೇ ದಿನದಲ್ಲಿ ಪರಿಹರಿಸುವ ಭರವಸೆಯನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೀಡಿದ್ದಾರೆ ಎಂದ ಹೇಳಿದರು.

ಸದ್ಯ ಯತ್ನಾಳ್ ಸಿಎಂ ಬದಲಾವಣೆ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯತ್ನಾಳ್ ಒಬ್ಬ ಒಳ್ಳೆಯ ಹೋರಾಟಗಾರ, ಪ್ರಖರ ಹಿಂದುತ್ವವಾದಿ. ಆದರೆ, ಈ ವಿಷಯದಲ್ಲಿ ಏಕೆ ಹೀಗೆ ಮಾಡುತ್ತಿದ್ದಾರೆಯೊ ಗೊತ್ತಿಲ್ಲ. ಯತ್ನಾಳ್ ಹೇಳುವ ಮಾತಿನಲ್ಲಿ ಎಷ್ಟು ನಿಜವಿದೆಯೋ ಸುಳ್ಳಿದೆಯೋ ಗೊತ್ತಿಲ್ಲ. ಪಕ್ಷದ ವರಿಷ್ಟರು ಇದನ್ನು ಗಮನಿಸುತ್ತಾರೆ ಎಂದು ನುಡಿದರು.

ತನ್ನ ವಿರುದ್ಧ ಸಹಿಸಂಗ್ರಹ ನಡೆಸುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಹಿ ಸಂಗ್ರಹ ಮಾಡುವುದರಿಂದ ನಾನು ಜಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ. ಸಹಿಸಂಗ್ರಹ ಮುಗಿದುಹೋಗಿರುವ ಕಥೆ. ಎಲ್ಲರೊಂದಿಗೂ ಮಾತನಾಡಿದ್ದೇನೆ. ಯಾರೂ ಮುಂದೆ ಈ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ ಎಂದು ಸಚಿವ ಕೆ.ಎಸ್​ ಈಶ್ವರಪ್ಪ ಅವರು ಮಾತನಾಡಿದ್ದಾರೆ.

Next Story

RELATED STORIES