Top

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​​ಗೆ ನಾಚಿಕೆ ಆಗಬೇಕು - ಸಚಿವ ಕೆ.ಎಸ್​ ಈಶ್ವರಪ್ಪ ವಾಗ್ದಾಳಿ

ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರೈತರ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸಿವೆ. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​​ಗೆ ನಾಚಿಕೆ ಆಗಬೇಕು -  ಸಚಿವ ಕೆ.ಎಸ್​ ಈಶ್ವರಪ್ಪ ವಾಗ್ದಾಳಿ
X

ಶಿವಮೊಗ್ಗ: ಕೇಂದ್ರ ಸರ್ಕಾರ ಕೃಷಿ ಬಗ್ಗೆ ನೂತನ ಮಸೂದೆ ‌ಜಾರಿಗೆ ತಂದಾಗ ರೈತರು ಖುಷಿಪಟ್ಟರು. ಆದರೆ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರೈತರ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸಿವೆ. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಅವರು ಹೇಳಿದ್ದಾರೆ.

ಶನಿವಾರ ಶಿವಮೊಗ್ಗನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ರಕ್ಷಣಾ ವ್ಯವಸ್ಥೆ ಬಲಪಡಿಸಲು ರಫೆಲ್ ಒಪ್ಪಂದ ಮಾಡಿಕೊಂಡಾಗ ಕಾಂಗ್ರೆಸ್ ಇದೊಂದು ದೊಡ್ಡ‌ ಹಗರಣ ಎಂದು ಆಪಾದಿಸಿತು‌. ಹಗರಣ ಸುಳ್ಳು ಎಂದು ಸುಪ್ರೀಂ ಕೋರ್ಟ್ ಹೇಳಿದ ಮೇಲೆ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು ಎಂದರು.

ಇನ್ನು ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತರಲಾಯಿತು. ಕಾಯ್ದೆ ಬಂದಾಗ ಅಲ್ಪ ಸಂಖ್ಯಾತರಿಗೆ ಬಿಜೆಪಿ ಅನ್ಯಾಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸಿತು. ಆದರೆ, ಬಿಜೆಪಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಂದೇ ಪೌರತ್ವದಲ್ಲಿ ಬದುಕಲಿ ಎಂದು ಜಾರಿಗೊಳಿಸಿತ್ತು. ಮಸೂದೆ ಬಗ್ಗೆ ಗೊತ್ತಾದ ಬಳಿಕ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿದೆ. ಇದೇ ರೀತಿ ಬರೀ ಸುಳ್ಳು ಹೇಳುವುದೇ ಕಾಂಗ್ರೆಸ್ ಕೆಲಸವಾಗಿದೆ. ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

ಸದ್ಯ ಕೃಷಿ ಮಸೂದೆಯ ಬಗ್ಗೆ ಕಾಂಗ್ರೆಸ್ ಹೇಳುತ್ತಿರುವ ಸುಳ್ಳನ್ನು ರೈತರು ನಂಬಬಾರದು. ರಾಜ್ಯದಲ್ಲೂ ಕೃಷಿ ಮಸೂದೆ ತಂದಾಗ ಯಡಿಯೂರಪ್ಪ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿತು. ಯಡಿಯೂರಪ್ಪ ಹಸಿರು ಶಾಲು ಹೊದ್ದಿದ್ದಾರೆ. ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಹಸಿರು ಶಾಲು ಇಲ್ಲ, ಕೇಸರಿ ಶಾಲು ಇಲ್ಲ. ಬರೀ ಟ್ವಿಟರ್​ನಲ್ಲಿ ಟ್ವಿಟ್​​ ಮಾಡಿ ಟೀಕೆ ಮಾಡುವುದೇ ಅವರ ಕೆಲಸ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು ಎಂದು ಸಚಿವ ಕೆ.ಎಸ್​ ಈಶ್ವರಪ್ಪ ಗುಡಗಿದ್ದಾರೆ.

Next Story

RELATED STORIES