Top

ತೌಕ್ತೆ ಚಂಡಮಾರುತ ಎಫೆಕ್ಟ್​​: ಇನ್ನೂ ಮೂರು ದಿನ ಕರಾವಳಿ ಡೇಂಜರ್​

ಇಂದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ

ತೌಕ್ತೆ ಚಂಡಮಾರುತ ಎಫೆಕ್ಟ್​​: ಇನ್ನೂ ಮೂರು ದಿನ ಕರಾವಳಿ ಡೇಂಜರ್​
X

ದಕ್ಷಿಣ ಕನ್ನಡ,ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರ ಇನ್ನೂ ಮೂರು ದಿನಗಳ ಕಾಲ ಜೋರಾಗೆ ಇರಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಬೆಳಗಾವಿ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡದಲ್ಲಿ ಬಿರುಸಿನ ಮಳೆ ಬೀಳಲಿದೆ. ಈ ಹಿನ್ನಲೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೇ17 ಮತ್ತು 18ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇನ್ನು ತೌಕ್ತೆ ಚಂಡಮಾರುತ ಸದ್ಯ ಅರಬ್ಬೀ ಸಮುದ್ರದ ಮಧ್ಯ ಭಾಗದಲ್ಲಿದ್ದು, ತೀವ್ರಗೊಳ್ಳುತ್ತಾ ಗುಜರಾತ್ ಕಡೆಗೆ ಚಲಿಸೋ ಮುನ್ಸೂಚನೆ ಇದೆ. ಈ ಕಾರಣದಿಂದ ಮುಂದಿನ ಮೂರುದಿನಗಳ ಕಾಲ ಈ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೆ ತೀವ್ರವಾಗಿರಲಿದೆ ಎಂದು ಸಿಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

Next Story

RELATED STORIES