ನನಗೂ ಸಿಎಂ ಬಿಎಸ್ವೈ ನಡುವೆ ಜಗಳ ಶುರುವಾಗಿದೆ - ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಇರೋದಿಲ್ಲ

ವಿಜಯಪುರ: ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಇರೋದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಭವಿಷ್ಯ ನುಡಿದಿದ್ದಾರೆ.
ವಿಜಯಪುರದ ವಾರ್ಡ್ 3ರಲ್ಲಿ ನಡೆದ ಹನುಮಂತ ದೇವಸ್ಥಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದವರಿಗೂ ಸಿಎಂ ಬಿಎಸ್ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ 100 ಶಾಸಕರನ್ನು ಗೆಲ್ಲಿಸಿ ಕಳಿಸ್ತಾರೆ. ಆದರೆ, ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದಿರ್ತಾರೆ ಎಂದು ಹೇಳಿದ್ದಾರೆ.
ಇನ್ನು ಮೈಸೂರು, ಮಂಡ್ಯ, ಶಿವಮೊಗ್ಗ ಭಾಗದಲ್ಲಿ ಇವರಿಗೆ ಯಾರೂ ವೋಟ್ ಹಾಕಲ್ಲ. ಈ ಬಗ್ಗೆ ಪ್ರದಾನಿ ಮೋದಿಗೂ ಮನವರಿಕೆಯಾಗಿದೆ ಆದರೂ ಆ ಭಾಗದವರೇ ಒಬ್ಬರು ಸಿಎಂ ಆಗ್ತಾರೆ. ಮುಂದಿನ ಬಾರೀ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ. ಇಲ್ಲಿನವರನ್ನೇ ಸಿಎಂ ಮಾಡುವ ಭರವಸೆಯನ್ನು ನಮಗೆ ಪ್ರಧಾನಿ ನೀಡಿದ್ದಾರೆ ಎಂದಿದ್ದಾರೆ.
ಸದ್ಯ ಈಗಾಗಲೇ ನನಗೂ ಹಾಗೂ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಜಗಳ ಶುರುವಾಗಿದೆ. ನನ್ನ ಮತಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದರು. ಹೀಗಾಗಿ ಒಂದು ಬಾರಿ ಸಿಎಂ ವಿರುದ್ಧ ಜಗಳ ಆಗಿದೆ. ಇನ್ನೇನು ಸಿಎಂ ಬಿ.ಎಸ್ ಯಡಿಯೂರಪ್ಪ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.