Top

ಬಕ್ರೀದ್​ ಪಾರ್ಥನೆಗೆ ತೆರಳುತ್ತಿದ್ದ ವ್ಯಕ್ತಿಯ ಭೀಕರ ಹತ್ಯೆ

ಮಚ್ಚಿನಿಂದ ಹೊಡೆದು ಕೊಲೆಗೈದ ದುಷ್ಕರ್ಮಿಗಳು

ಬಕ್ರೀದ್​ ಪಾರ್ಥನೆಗೆ ತೆರಳುತ್ತಿದ್ದ ವ್ಯಕ್ತಿಯ ಭೀಕರ ಹತ್ಯೆ
X

ಯಾದಗಿರಿ: ವ್ಯಕ್ತಿಯೋರ್ವರನ್ನ ಮಚ್ಚಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆ ಶಹಾಪುರ್ ತಾಲೂಕಿನ ಗೋಗಿ(ಕೆ) ಗ್ರಾಮದಲ್ಲಿ ನಡೆದಿದೆ. ಚಾಂದ್ ಸಾಬ್ ಚೌದ್ರಿ (50)

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮೃತ ಚಾಂದ್​ ಸಾಬ್​ ಮುಂಜಾನೆ 4:30ಗಂಟೆ ಪ್ರಾರ್ಥನೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಮಚ್ಚಿನಿಂದ ಹೊಡೆದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಡಿವೈಎಸ್​ಪಿ ವೆಂಕಟೇಶ್ ಹುಗಿಬಂಡಿ, ಸಿಪಿಐ ಶ್ರೀನಿವಾಸ ಅಲ್ಲಾಪುರ,ಹಾಗೂ ಪಿಎಸ್ಐ ಸೋಮು ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೋಗಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತದೇಹವನ್ನು ಶಹಾಪುರ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Next Story

RELATED STORIES