Top

COVID 19 India Updates: ದೇಶದಾದ್ಯಂತ 72,01,070 ಮಂದಿ ಗುಣಮುಖರಾಗಿದ್ದಾರೆ

ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 36,469 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

COVID 19 India Updates: ದೇಶದಾದ್ಯಂತ 72,01,070 ಮಂದಿ ಗುಣಮುಖರಾಗಿದ್ದಾರೆ
X

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 36,469 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 488 ಮಂದಿ ಮೃತಪಟ್ಟಿದ್ದಾರೆ. 72,01,070 ಮಂದಿ ಕೋವಿಡ್‌ ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,19,502 ಸೋಂಕಿತರು ಮೃತಪಟ್ಟಿದ್ದಾರೆ. 72,01,070 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 6,25,857 ಸಕ್ರಿಯ ಪ್ರಕರಣಗಳಿವೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16.5 ಲಕ್ಷ ಜನರಿಗೆ ಸೋಂಕು ಪತ್ತೆಯಾಗಿವೆ. ಆ ಪೈಕಿ 43,264 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದಲ್ಲಿ 8.07 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 6,587 ಮಂದಿ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ ಸೋಮವಾರ 3,130 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8,05,947ಕ್ಕೆ ಏರಿಕೆಯಾಗಿದೆ. ಆ ಪೈಕಿ 10,947 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಇದುವರೆಗೆ 3.57 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,258 ಮಂದಿ ಬಲಿಯಾಗಿದ್ದಾರೆ.

Next Story

RELATED STORIES