Top

ತಮಿಳುನಾಡು: ನಟ ರಜನಿಕಾಂತ್​ ರಾಜಕೀಯ ಪ್ರವೇಶದ ಬಗ್ಗೆ ಇಂದು ನಿರ್ಧಾರ ಸಾಧ್ಯತೆ

021ರ ಮೇ ತಿಂಗಳಲ್ಲಿ ತಮಿಳುನಾಡಿನ ವಿಧಾನಸಭೆ ಚುನಾವಣೆ ಹಿನ್ನೆಲೆ ಅವರ ರಾಜಕೀಯ ನಿರ್ಧಾರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ

ತಮಿಳುನಾಡು: ನಟ ರಜನಿಕಾಂತ್​ ರಾಜಕೀಯ ಪ್ರವೇಶದ ಬಗ್ಗೆ ಇಂದು ನಿರ್ಧಾರ ಸಾಧ್ಯತೆ
X

ಸೂಪರ್​ ಸ್ಟಾರ್​ ರಜನಿಕಾಂತ್​

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ವಿಷಯದ ಕುರಿತು ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, 2021ರ ಮೇ ತಿಂಗಳಲ್ಲಿ ತಮಿಳುನಾಡಿನ ವಿಧಾನಸಭೆ ಚುನಾವಣೆ ಹಿನ್ನೆಲೆ ಅವರ ರಾಜಕೀಯ ನಿರ್ಧಾರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಹಿಂದೆ ಅವರು ಅನಾರೋಗ್ಯದ ಕಾರಣ ರಾಜಕೀಯದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ವೈರಲ್​ ಆಗಿತ್ತು. ಈ ಬಗ್ಗೆ ಸ್ವತಃ ರಜನಿಕಾಂತ್ ಪ್ರತಿಕ್ರಿಯೆ ನೀಡಿರುವ ಮೂಲಕ ವದಂತಿಗಳಿಗೆ ಬ್ರೇಕ್ ಹಾಕಿದ್ದರು.

ಸೋಮವಾರ ಅಂದರೆ ಇಂದು ಮಕ್ಕಳ್ ಮಂದ್ರಂ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳ ಸಭೆ ನಿಗದಿಯಾಗಿದೆ. ಸಭೆಯಲ್ಲಿ ರಾಜಕೀಯ ಪ್ರವೇಶ, ಚುನಾವಣೆ ಸ್ಪರ್ಧೆ ಸೇರಿದಂತೆ ಇತರ ವಿಷಯಗಳ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಸದ್ಯ ಕೋವಿಡ್​ 19 ಹಿನ್ನೆಲೆ ಇಂದು ಸಭೆ ನಡೆಯುವ ಸಭೆ ಆನ್​ಲೈನ್​ನಲ್ಲಿ ನಡೆಯುತ್ತಾ(?) ಅಥವಾ ಎಲ್ಲರೂ ಭಾಗಿಯಾಗುತ್ತಾರಾ(?) ಎಂಬ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.

ರಜನಿಕಾಂತ್​ ಅವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಂದಾಗಿ ಕೊರೊನಾ ವೈರಸ್ ಸಮಯದಲ್ಲಿ ಎಚ್ಚರಿಕೆಯಿಂದ ಇರಬೇಕು ಎಂಬ ಕಾರಣಕ್ಕೆ ರಾಜಕೀಯ ಪ್ರವೇಶ ವಿಳಂಬ ಆಗಲಿದೆ ಎಂಬ ಸುದ್ದಿ ಹರಿದಾಡಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಜನಿಕಾಂತ್ ಅವರು, ವೈದ್ಯರ ಸಲಹೆ ನಿಜ. ಆದರೆ, ಪತ್ರ ನನ್ನದಲ್ಲ ಎಂದು ಹೇಳಿದ್ದರು. ಹೀಗಾಗಿ ಸಹಜವಾಗಿಯೇ ಇವತ್ತು ನಡೆಯುತ್ತಿರುವ ಸಭೆಯ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

Next Story

RELATED STORIES