Top

ಪತಿ ಕಳೆದುಕೊಂಡ ಗೆಳತಿಗೆ ಭಾವುಕ ಪತ್ರ ಬರೆದ ನಟಿ ಶ್ರುತಿ

ಪತ್ರದ ಮೂಲಕ ಗೆಳತಿಗೆ ಧೈರ್ಯ ತುಂಬಿದ ಶ್ರುತಿ

ಪತಿ ಕಳೆದುಕೊಂಡ ಗೆಳತಿಗೆ ಭಾವುಕ ಪತ್ರ ಬರೆದ ನಟಿ ಶ್ರುತಿ
X

ಕಳೆದ ಮೂರು ದಿನಗಳ ಹಿಂದೆ ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ರಾಮು ಅವರು ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ. ರಾಮು ಅವರನ್ನು ಕಳೆದುಕೊಂಡ ಪತ್ನಿ ಮಾಲಾಶ್ರೀಗೆ ಗೆಳತಿ ಶ್ರುತಿಯವರು ಭಾವುಕ ಪತ್ರವೊಂದನ್ನ ಬರೆದಿದ್ದಾರೆ.

ಮೊದಲಿಗೆ ಭಾರವಾದ ಹೃದಯದಿಂದ ರಾಮು ಅವರಿಗೆ ಭಾವ ಪೂರ್ಣ ಶ್ರದ್ಧಾಂಜಲಿ. ನಿಮ್ಮ ಅಭಿಮಾನಿಯಾಗಿ, ನಿಮ್ಮ ಸಹೋದ್ಯೋಗಿಯಾಗಿ, ಒಬ್ಬ ಗೆಳತಿಯಾಗಿ ಇಂಥ ದುಃಖದ ಪರಿಸ್ಥಿತಿಯಲ್ಲಿ ನಿಮ್ಮನ್ನು ನೋಡಲು ಸಾಧ್ಯವಾಗದೇ ಕನಿಷ್ಠ ನಿಮ್ಮ ಕಣ್ಣೀರನ್ನು ಒರೆಸಲು ಸಾಧ್ಯವಾಗದ ಈ ಕ್ರೂರ ಪರಿಸ್ಥಿತಿಗೆ ನನ್ನದೊಂದು ದಿಕ್ಕಾರ.ಮಾಲಾ ನಿಮಗಾದ ನಷ್ಟವನ್ನು ಸರಿಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಮುಂಬರುವ ದಿನಗಳನ್ನು ಧೈರ್ಯವಾಗಿ ಎದುರಿಸಬೇಕಾಗಿರುವ ಅನಿವಾರ್ಯತೆ ಇದೆ. ನಿಮಗಾಗಿ, ನಿಮ್ಮ ಕೋಟ್ಯಾನುಕೋಟಿ ಅಭಿಮಾನಿಗಳಿಗಾಗಿ ಬಹುಮುಖ್ಯವಾಗಿ ನಿಮ್ಮ ಮುದ್ದು ಮಕ್ಕಳ ಭವಿಷ್ಯಕ್ಕಾಗಿ.

ನೀವು ಹುಟ್ಟುಹೋರಾಟಗಾರ್ತಿ ಅದು ನನ್ನ ಕಣ್ಣಾರೆ ನೋಡಿದ್ದೇನೆ. ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚಿದ್ದು ಕೇವಲ ಅದೃಷ್ಟದಿಂದ ಅಲ್ಲ ನಿಮ್ಮ ಪರಿಶ್ರಮದಿಂದ. ನಂತರ ಒಬ್ಬ ಉತ್ತಮ ಗೃಹಿಣಿ ಆಗಿದ್ದು ಕೇವಲ ದೇವರ ವರದಿಂದ ಅಲ್ಲಾ ತ್ಯಾಗ, ಸಹನೆ, ಪ್ರೀತಿಯಿಂದ, ಒಳ್ಳೆ ತಾಯಿ ಆಗಲೂ ಅಷ್ಟೇ ಶ್ರಮ, ಪ್ರಯತ್ನ ಇದ್ದೇ ಇರುತ್ತೆ. ಹೀಗೆ ಜೀವನದ ಎಲ್ಲಾ ಏರಿಳಿತದ ಸಂದರ್ಭವನ್ನು ಧೈರ್ಯವಾಗಿ ನಿಭಾಯಿಸಿಕೊಂಡು ಬಂದಿದ್ದೀರಿ. ರಾಮು ಅವರಿಲ್ಲದ ಮುಂದಿನ ದಿನಗಳು ನಿಮಗೆ ಕಷ್ಟಕರವಾಗಿದ್ದರು ಅದನ್ನು ನಿಭಾಯಿಸುತ್ತೀರಿ ಹಾಗೂ ನಿಭಾಯಿಸುವ ಶಕ್ತಿ ಆ ದೇವರು ನಿಮಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಆ ಕಷ್ಟದ ಹಾದಿಯಲ್ಲಿ ಎಂದಾದರೂ ಈ ಗೆಳತಿಯ ಸಹಾಯ ಬೇಕಾದಲ್ಲಿ ಒಂದು ಫೋನ್ ಕಾಲ್ ಸಾಕು ಎಂದು ಸುಧೀರ್ಘ ಪತ್ರ ಬರೆದು ಧೈರ್ಯ ತುಂಬಿದ್ದಾರೆ.

Next Story

RELATED STORIES