Top

COVID 19 India Update: ದೇಶಾದ್ಯಂತ ಒಂದೇ ದಿನದಲ್ಲಿ 77,266 ಹೊಸ ಪ್ರಕರಣ ಪತ್ತೆ 1,057 ಮಂದಿ ಸಾವು

33,87,501 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 25,83,948ಕ್ಕೆ ತಲುಪಿದೆ.

COVID 19 India Update: ದೇಶಾದ್ಯಂತ ಒಂದೇ ದಿನದಲ್ಲಿ 77,266 ಹೊಸ ಪ್ರಕರಣ ಪತ್ತೆ 1,057 ಮಂದಿ ಸಾವು
X

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 77,266 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33,87,501ಕ್ಕೆ ಏರಿಕೆಯಾಗಿದ್ರೆ, 1,057 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 61,529ಕ್ಕೆ ಬಂದು ನಿಂತಿದೆ.

33,87,501 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 25,83,948ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 7,42,023 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 9,386 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ 3,09,792 ಒಟ್ಟು ಸಕ್ರಿಯ ಪ್ರಕರಣಗಳಿದ್ದು, ನಿನ್ನೆ ಸಾವನ್ನಪ್ಪಿದ್ದವರು 141 ಮಂದಿ. ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 7,866 ಮಂದಿ.

ಬೆಂಗಳೂರಿನಲ್ಲಿಯೇ 3,357 ಪ್ರಕರಣಗಳು ದೃಢಪಟ್ಟಿದ್ದರೆ, ಒಟ್ಟು 1,18,728 ಸಕ್ರಿಯ ಪ್ರಕರಣಗಳಿದ್ದು, 59 ಮಂದಿ ಸಾವನ್ನಪ್ಪಿದ್ದಾರೆ. 3,362 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Next Story

RELATED STORIES