Top

ದೇಶದಲ್ಲಿ ಒಂದೇ ದಿನ 91,702 ಮಂದಿಗೆ ಕೊರೊನಾ ಸೋಂಕು ದೃಢ

ಕಳೆದ 24 ಗಂಟೆಗಳಲ್ಲಿ 1,34,580 ಸೋಂಕಿತರು ಗುಣಮುಖ

ದೇಶದಲ್ಲಿ ಒಂದೇ ದಿನ 91,702 ಮಂದಿಗೆ ಕೊರೊನಾ ಸೋಂಕು ದೃಢ
X

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 91,702 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 3,403 ಸೋಂಕಿತರು ಸಾವನ್ನಪ್ಪಿದ್ದು, 1,34,580 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 2,92,74,823 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 3,63,079 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 11,21,671 ಸಕ್ರೀಯ ಪ್ರಕರಣಗಳಿದ್ದು 2,77,90,073 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಒಟ್ಟಾರೆ ದೇಶದಲ್ಲಿ ಈವರೆಗೆ 24,60,85,649 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

Next Story

RELATED STORIES