Top

ಶಿಸ್ತಿನ ವ್ಯಾಪ್ತಿ ಮೀರಬಾರದು-ಬೆಂಬಲಿಗರಿಗೆ ಸಿಎಂ ಬಿಎಸ್​ವೈ ಮನವಿ

ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆ

ಶಿಸ್ತಿನ ವ್ಯಾಪ್ತಿ ಮೀರಬಾರದು-ಬೆಂಬಲಿಗರಿಗೆ ಸಿಎಂ ಬಿಎಸ್​ವೈ ಮನವಿ
X

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಗರಿಗೆದರಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಟ್ವೀಟ್​ ಮಾಡಿದ್ದಾರೆ.

ಸಿಎಂ ಬಿಎಸ್​​ವೈ ಟ್ವೀಟ್ ಮೂಲಕ ತಮ್ಮ ಅಭಿಮಾನಿಗಳು,ಬೆಂಬಲಿಗರಿಗೆ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಹೇಳಿದ್ದಾರೆ.

Next Story

RELATED STORIES