Top

ನಾನೇ ಇನ್ನೆರಡು ವರ್ಷ ಮುಖ್ಯಮಂತ್ರಿ-ಸಿಎಂ ಬಿಎಸ್​ವೈ

ಅರುಣ್ ಸಿಂಗ್​ ಅವರ ಮಾತಿನಿಂದ ನನಗೆ ಜವಾಬ್ದಾರಿ ಹೆಚ್ಚಾಗಿದೆ

ನಾನೇ ಇನ್ನೆರಡು ವರ್ಷ ಮುಖ್ಯಮಂತ್ರಿ-ಸಿಎಂ ಬಿಎಸ್​ವೈ
X

ಹಾಸನ: ನಾನು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ. ಅರುಣ್ ಸಿಂಗ್​ ಅವರ ಮಾತಿನಿಂದ ನನಗೆ ಜವಾಬ್ದಾರಿ ಹೆಚ್ಚಾಗಿದೆ. ಅಮಿತ್ ಶಾ ಹಾಗೂ ಅರುಣ್ ಸಿಂಗ್ ಅವರು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದ್ದಾರೆ, ನಾನೇ ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಚರ್ಚೆ ಸಂದರ್ಭದಲ್ಲಿ ಅನೇಕ ವಿಚಾರಗಳ ಬಗ್ಗೆ ಸಲಹೆ ಕೊಟ್ಟಿದ್ದಾರೆ, ಹಾಸನ ನಗರದಲ್ಲಿ ವಿಮಾನ ನಿಲ್ದಾಣ ಕಾರ್ಯಕ್ರಮ ನಾಳೆಯಿಂದ ಮಾಡಿಸುತ್ತೇನೆ. ರಾಗಿಗೆ ಬೆಂಬಲ ಬೆಲೆಯ ಬಾಕಿ ಹಣ ಬಿಡುಗಡೆ ಮಾಡಿಸುತ್ತೇನೆ. ಹಾಸನ ಹಾಗೂ ಕೊಡಗಿನಲ್ಲಿ ಕಾಡಾನೆಗಳ ಹಾವಾಳಿ ಬಗ್ಗೆ ಗಡಿ ಭಾಗದಲ್ಲಿ ಬ್ಯಾರಿಕೇಡ್ ಹಾಕಲು ಹಣ ಬಿಡುಗಡೆ ಮಾಡುತ್ತೇನೆ, ನಮ್ಮ ಹಣಕಾಸಿನ ಇತಿಮಿತಿಯಲ್ಲಿ ಹಾಸನಕ್ಕೆ ಮೊದಲ ಆದ್ಯತೆ ಕೊಡುತ್ತೇನೆ ಎಂದಿದ್ದಾರೆ.

Next Story

RELATED STORIES