Top

CM ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು-ಸಿದ್ದರಾಮಯ್ಯ

ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ

CM ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು-ಸಿದ್ದರಾಮಯ್ಯ
X

ಬೆಂಗಳೂರು: ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಆರೋಗ್ಯ ಸಚಿವ ಸುಧಾಕರ್​ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ..? ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.

Next Story

RELATED STORIES