Top

2nd Test IND VS AUS : ಟೀಂ ಇಂಡಿಯಾ 326ಕ್ಕೆ ಆಲೌಟ್​; ಟೀ ವಿರಾಮಕ್ಕೆ​ ಆಸೀಸ್​ 65/2

ಭಾರತವು ಕೊನೆಯ 5 ವಿಕೆಟ್‌ಗಳನ್ನು ಕೇವಲ 32 ರನ್ ಅಂತರದಲ್ಲಿ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿತ್ತು.

2nd Test IND VS AUS : ಟೀಂ ಇಂಡಿಯಾ 326ಕ್ಕೆ ಆಲೌಟ್​; ಟೀ ವಿರಾಮಕ್ಕೆ​ ಆಸೀಸ್​ 65/2
X

ಮೆಲ್ಬೋರ್ನ್: ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್‌ನಲ್ಲಿ 131 ರನ್‌ ಹಿನ್ನೆಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಆಸೀಸ್​ ತಂಡ, ಮೂರನೇ ದಿನದಾಟದ ಟೀ ವಿರಾಮದ ಹೊತ್ತಿಗೆ 28 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳಿಸಿದ್ದು, ಇದರೊಂದಿಗೆ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಹಿಡಿತವನ್ನು ಬಿಗುಗೊಳಿಸಿದೆ. ಮತ್ತೊಂದೆಡೆ ಆಸ್ಟ್ರೇಲಿಯಾ 66 ರನ್ ಹಿನ್ನಡೆಯಲ್ಲಿದೆ.

ಇದೇ ವೇಳೆಯಲ್ಲಿ ಗಾಯದ ಸಮಸ್ಯೆಗೊಳಗಾಗಿರುವ ವೇಗಿ ಉಮೇಶ್ ಯಾದವ್ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ. ಸದ್ಯ ಪ್ರಸ್ತುತ ಕ್ರೀಸಿನಲ್ಲಿರುವ ಮ್ಯಾಥ್ಯೂ ವೇಡ್ ಔಟಾಗದೇ 27,​ ಹಾಗೂ ಸ್ಟೀವನ್ ಸ್ಮಿತ್ ಔಟಾಗದೇ 6, ದಿನದ ಅಂತಿಮ ವೇಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಈ ಮೊದಲು ಭಾರತ ತಂಡದ ನಾಯಕ ಅಜಿಂಕ್ಯ ರಹಾನೆ ಆಕರ್ಷಕ ಶತಕ (112) ಹಾಗೂ ರವೀಂದ್ರ ಜಡೇಜ ಅರ್ಧಶತಕದ (57) ಬೆಂಬಲದೊಂದಿಗೆ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 115.1 ಓವರ್‌ಗಳಲ್ಲಿ 326 ರನ್‌ಗಳಿಗೆ ಆಲೌಟ್​ ಆಗಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 131 ರನ್‌ಗಳ ಮಹತ್ವದ ಮುನ್ನಡೆ ಗಳಿಸಿದೆ. ಊಟದ ವಿರಾಮಕ್ಕೆ ಕೆಲವೇ ಕ್ಷಣಗಳಿರುವಾಗ ಭಾರತ ಆಲೌಟ್​ ಆಗಿತ್ತು.

277ಕ್ಕೆ 5 ಎಂಬಲ್ಲಿದ್ದ ಮೂರನೇ ದಿನದಾಟ ಮುಂದುವರಿಸಿದ ನಾಯಕ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜ ತಂಡದ ಮುನ್ನಡೆಯನ್ನು ಶತಕದ ಗಡಿ ದಾಟಿಸಿದರು. ಆದರೆ, ಜಡೇಜ ಜೊತೆಗಿನ ಹೊಂದಾಣಿಕೆ ಕೊರತೆಯಿಂದಾಗಿ ರಹಾನೆ ರನೌಟ್‌ ಆಗಿ ಹೊರನಡೆದರು.

223 ಎಸೆತಗಳನ್ನು ಎದುರಿಸಿದ ರಹಾನೆ 12 ಬೌಂಡರಿಗಳ ಸಹಿತ 112 ರನ್ ಗಳಿಸಿದರು. ಈ ಮೂಲಕ ಆಸೀಸ್ ನೆಲದಲ್ಲಿ ಸ್ಮರಣೀಯ ಶತಕ ಬಾರಿಸಿದರು. ಅಲ್ಲದೆ, ಆರನೇ ವಿಕೆಟ್‌ಗೆ ರವೀಂದ್ರ ಜಡೇಜ ಅವರೊಂದಿಗೆ 121 ರನ್‌ಗಳ ಜೊತೆ ಆಟದಲ್ಲಿ ಭಾಗಿಯಾದರು.

ಮತ್ತೊಂದು ಕಡೆ ಪರಿಣಾಮಕಾರಿ ಇನ್ನಿಂಗ್ಸ್ ಕಟ್ಟಿದ ಆಲ್​ರೌಂಡರ್​ ರವೀಂದ್ರ ಜಡೇಜ ಅರ್ಧಶತಕ ಸಾಧನೆ ಮಾಡಿದರು. ಆದರೆ, ಅರ್ಧಶತಕದ ಬೆನ್ನಲ್ಲೇ ಜಡೇಜ ಕೂಡಾ ತಮ್ಮ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. 159 ಎಸೆತಗಳನ್ನು ಎದುರಿಸಿದ ಜಡೇಜ ಮೂರು ಬೌಂಡರಿಗಳ ಸಹಿತ 57 ರನ್ ಕಲೆಹಾಕಿದರು.

ಭಾರತವು ಕೊನೆಯ ಐದು ವಿಕೆಟ್‌ಗಳನ್ನು ಕೇವಲ 32 ರನ್ ಅಂತರದಲ್ಲಿ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿತ್ತು. ಟೀಂ ಇಂಡಿಯಾದ ಕೆಳಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲಿಲ್ಲ. ಅಂತಿಮವಾಗಿ ಭಾರತ 326 ರನ್‌ಗಳಿಗೆ ಆಲೌಟ್​ ಆಯ್ತು.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಹಾಗೂ ನಥನ್ ಲಿಯನ್ ತಲಾ ಮೂರು ಮತ್ತು ಪ್ಯಾಟ್ ಕಮಿನ್ಸ್ ಎರಡು ವಿಕೆಟ್ ಕಬಳಿಸಿದರು.

Next Story

RELATED STORIES