Top

IPL 2020: ಡೆಲ್ಲಿ ಕ್ಯಾಪಿಟಲ್ಸ್​​ ವಿರುದ್ಧ ಮೊದಲ ಜಯದ ಕನವರಿಕೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್

ಡೆಲ್ಲಿ ಕ್ಯಾಪಿಟಲ್ಸ್​​ ಬಲಿಷ್ಠ ತಂಡಗಳ ವಿರುದ್ಧದ ಮೊದಲ ಎರಡೂ ಪಂದ್ಯಗಳನ್ನು ಗೆದ್ದುಕೊಂಡು ವಿಶ್ವಾಸದಲ್ಲಿದ್ದು, ಈ ತಂಡ ಮೂರನೇ ಪಂದ್ಯದಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ

IPL 2020: ಡೆಲ್ಲಿ ಕ್ಯಾಪಿಟಲ್ಸ್​​ ವಿರುದ್ಧ ಮೊದಲ ಜಯದ ಕನವರಿಕೆಯಲ್ಲಿ ಸನ್‌ರೈಸರ್ಸ್ ಹೈದರಾಬಾದ್
X

ಅಬುಧಾಬಿ: ಈ ಬಾರಿ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​ ಬಲಿಷ್ಠ ತಂಡಗಳ ವಿರುದ್ಧದ ಮೊದಲ ಎರಡೂ ಪಂದ್ಯಗಳನ್ನು ಗೆದ್ದುಕೊಂಡು ವಿಶ್ವಾಸದಲ್ಲಿದ್ದು, ಈ ತಂಡ ಮೂರನೇ ಪಂದ್ಯದಲ್ಲಿ ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಸನ್‌ರೈಸರ್ಸ್ ತಂಡವು ಈಗಾಗಲೇ ಎರಡೂ ಪಂದ್ಯಗಳನ್ನು ಸೋತಿದ್ದು, ಗೆಲುವಿನ ಲಯಕ್ಕೆ ಮರಳಲು ಹಂಬಲಿಸುತ್ತಿದೆ.

ಶ್ರೇಯಸ್‌ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಪಂದ್ಯದ ಸೂಪರ್ ಓವರ್‌ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಎದುರು ಜಯ ಗಳಿಸಿತ್ತು. ಎಡರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 44 ರನ್‌ಗಳ ಅಂತರದಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿತ್ತು.

ಡೇವಿಡ್ ವಾರ್ನರ್ ನಾಯಕತ್ವದ ಸನ್‌ರೈಸರ್ಸ್ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ 10 ರನ್‌ಗಳ ಅಂತರದಿಂದ ಸೋತಿತ್ತು. ಎರಡನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ವಿರುದ್ಧ ಏಳು ವಿಕೆಟ್‌ಗಳಿಂದ ಪರಾಭವಗೊಂಡಿತ್ತು.

ಮೊದಲ ಪಂದ್ಯದಲ್ಲಿ 164 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ತಂಡದ ಪರ ಆರಂಭಿಕ ಬ್ಯಾಟ್ಸ್‌ಮನ್ ಜಾನಿ ಬೆಸ್ಟೊ (61) ಮತ್ತು ಮನೀಷ್ ಪಾಂಡೆ (34) ಉತ್ತಮದ ಪ್ರದರ್ಶನ ನೀಡಿದರ ಸಹ ತಂಡವನ್ನು ಗೆಲ್ಲಿಸಲು ಸಾಧ್ಯವಾಗಿರಲಿಲ್ಲ.

ಎರಡನೇ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ ತಂಡಕ್ಕೆ ಸವಾಲಿನ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ವಿಕೆಟ್ ಕೀಪರ್, ಬ್ಯಾಟ್ಸ್​ಮನ್​ ವೃದ್ಧಿಮಾನ್ ಸಹಾ ಬ್ಯಾಟಿನಿಂದ ರನ್‌ಗಳು ಹರಿದು ಬರುತ್ತಿಲ್ಲ. ಇನ್ನೊಂದೆಡೆ, ಹಿರಿಯ ಅನುಭವಿ ಆಟಗಾರ ಕೇನ್ ವಿಲಿಯಮ್ಸನ್​ಗೆ ಆಡುವ 11ರಲ್ಲಿ ಸ್ಥಾನ ನೀಡಬೇಕೆಂಬ ಸಲಹೆ ಕೇಳಿಬರುತ್ತಿದ್ದು, ಈ ಪಂದ್ಯದಲ್ಲಿ ತಂಡದ ಆಡಳಿತ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕಾದುನೋಡಬೇಕು.

Next Story

RELATED STORIES