Top

ಕೆ.ಎಲ್​ ರಾಹುಲ್​ ಹಾಗೂ ಮಯಾಂಕ್ ಅಗರ್ವಾಲ್​ಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟ್ಟುಗಳಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ

ಕೆ.ಎಲ್​ ರಾಹುಲ್​ ಹಾಗೂ ಮಯಾಂಕ್ ಅಗರ್ವಾಲ್​ಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ
X

ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆಯು ನವೆಂಬರ್​ 01ರಂದು (ಕನ್ನಡ ರಾಜ್ಯೋತ್ಸವ) 2017, 2018 ಮತ್ತು 2019ನೇ ಸಾಲಿನ ಏಕಲವ್ಯ, ಜೀವವವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್.ಎಸ್.ಎಸ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಗೊಳಿಸಿತು. ಈ ಪಟ್ಟಿಯಲ್ಲಿ ರಾಜ್ಯದ ಕ್ರಿಕೆಟ್​ ಆಟಗಾರರಾದ ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ವೇದಾ ಕೃಷ್ಣಮೂರ್ತಿ ಅವರಿಗೆ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ದೊರೆತಿದೆ.

ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್‌ ಇಂಡಿಯಾ ಆರಂಭಿಕ ಬ್ಯಾಟ್ಸ್​ಮನ್​ ಹಾಗೂ ಕಿಂಗ್ಸ್ ಇಲೆವೆನ್‌ ಪಂಜಾಬ್​ ತಂಡ ನಾಯಕ ಕೆ.ಎಲ್‌ ರಾಹುಲ್‌ ಧನ್ಯವಾದಗಳನ್ನು ಹೇಳಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ಪ್ರವಾಸದ ಸರಣಿಗೆ ಟೀಮ್ ಇಂಡಿಯಾ ರಾಹುಲ್​ ಅವರನ್ನು ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಕೆ.ಎಲ್​ ರಾಹುಲ್​ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿಯನ್ನು ಸ್ವೀಕರಿಸಲು ತುಂಬಾ ಹೆಮ್ಮೆಯೆನಿಸುತ್ತಿದೆ. ಈ ಗೌರವವನ್ನು ನೀಡಿದ ಕರ್ನಾಟಕ ಸರಕಾರಕ್ಕೆ ನಾನು ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಧನ್ಯವಾದಗಳು ಎಂದು ಅವರು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.ಇನ್ನು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಏಕಲವ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರಕ್ಕೆ ಟೀಮ್‌ ಇಂಡಿಯಾ ಆಟಗಾರ ಹಾಗೂ ಕಿಂಗ್ಸ್ ಇಲೆವೆನ್‌ ಪಂಜಾಬ್ ಆಟಗಾರ ಮಯಾಂಕ್ ಅಗರ್ವಾಲ್ ಧನ್ಯವಾದಗಳನ್ನು ತಿಳಿಸಿದ್ದಾರೆ.ನನ್ನ ಸಾಧನೆಯನ್ನ ಗುರುತಿಸಿ ನನಗೆ ಏಕಲವ್ಯ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ಅದ್ಭುತ ರಾಜ್ಯವನ್ನು ಪ್ರತಿನಿಧಿಸುವುದು ನನಗೆ ಹೆಮ್ಮೆಯ ಸಂಗತಿ. ಈ ಪ್ರಶಸ್ತಿಗೆ ಕಾರಣರಾದ ಎಲ್ಲಾ ತರಬೇತುದಾರರು, ನನ್ನ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ ಎಂದು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುವ ಆಟಗಾರರಾದ ಕೆ.ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಫವಾದ್ ಮಿರ್ಜಾ, ಈಜುಪಟುಗಳಾದ ಖುಷಿ ದಿನೇಶ್, ಶ್ರೀಹರಿ ನಟರಾಜ್, ಅಥ್ಲೀಟ್ ಜಿ. ವಿಜಯಕುಮಾರಿ ಸೇರಿದಂತೆ 31 ಮಂದಿ ಕ್ರೀಡಾ ಸಾಧಕರು ಪ್ರತಿಷ್ಠಿತ ಏಕಲವ್ಯ ಕ್ರೀಡಾ ಗೌರವಕ್ಕೆ ಭಾಜನರಾಗಿದ್ದಾರೆ.

Next Story

RELATED STORIES