ಆಸೀಸ್ ನೆಲದಲ್ಲಿ ಹೊಸವರ್ಷ ಆಚರಿಸಿದ ಟೀ ಇಂಡಿಯಾ ಆಟಗಾರರು
ಆಸ್ಟ್ರೇಲಿಯಾ ಪ್ರವಾಸದಲ್ಲಿ ಇರುವ ಭಾರತ ತಂಡ 2021ರ ಹೊಸ ವರ್ಷದ ಸಂಭ್ರಮಾಚರಣೆಯನ್ನು ಆಸೀಸ್ ತವರಿನಲ್ಲಿ ಆಚರಿಸಿದೆ.

ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್, ಕನ್ನಡಿಗ ಕೆ.ಎಲ್. ರಾಹುಲ್, ವೇಗಿ ಜಸ್ಪ್ರೀತ್ ಬೂಮ್ರಾ, ಮಯಾಂಕ್ ಅಗರ್ವಾಲ್ ಮತ್ತು ತಂಡದ ಸಿಬ್ಬಂದಿಗಳು ಚಿತ್ರದಲ್ಲಿದ್ದಾರೆ.
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿ ಇರುವ ಭಾರತ ತಂಡ 2021ರ ಹೊಸ ವರ್ಷದ ಸಂಭ್ರಮಾಚರಣೆಯನ್ನು ಆಸೀಸ್ ತವರಿನಲ್ಲಿ ಆಚರಿಸಿದೆ. ಮುಂದೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಯಕ ಅಜಿಂಕ್ಯ ರಹಾನೆ ನೇತೃತ್ವದ ಭಾರತ ತಂಡ ನ್ಯೂ ಇಯರ್ ಸಂಭ್ರಮ ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ಬ್ಯಾಟ್ಸ್ಮನ್ ಕಮ್ ವಿಕೆಟ್ ಕೀಪರ್, ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ತಂಡದ ಹೊಸ ವರ್ಷಾಚರಣೆಯ ಚಿತ್ರ ಹಂಚಿಕೊಂಡಿದ್ದು, ರಾಹುಲ್ ಜೊತೆಗೆ ವೇಗಿ ಜಸ್ಪ್ರೀತ್ ಬೂಮ್ರಾ, ಮಯಾಂಕ್ ಅಗರ್ವಾಲ್ ಮತ್ತು ತಂಡದ ಸಿಬ್ಬಂದಿಗಳು ಕಾಣಿಸಿಕೊಂಡಿದ್ದಾರೆ.
ಇನ್ನು ರಾಹುಲ್ ಶೇರ್ ಮಾಡಿರುವ ಪೋಸ್ಟ್ನಲ್ಲಿ 'ಹೊಸ ವರ್ಷ, ಹೊಸ ಭಾವನೆ, ಹೊಸ ಅವಕಾಶಗಳು, ಅದೇ ಕನಸುಗಳು, ಶುಭ್ರ ಆರಂಭ 2021' ಎಂದು ಬರೆದುಕೊಂಡಿದ್ದಾರೆ.
ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು, ಎರಡೂ ತಂಡಗಳು 1-1ರ ಸಮಬಲ ಸಾಧಿಸಿವೆ. ಮೂರನೇ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಮುಂಜಾನೆ 5 ಗಂಟೆಗೆ ಆರಂಭವಾಗಲಿದೆ.