Top

ಲೈಂಗಿಕ ದುರ್ಬಳಕೆ ಆರೋಪ: ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ದಾಖಲಾಗಿದೆ.

ಲೈಂಗಿಕ ದುರ್ಬಳಕೆ ಆರೋಪ:  ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ
X

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸೆಕ್ಸ್​ ಸಿಡಿಯಲ್ಲಿ ಭಾಗವಹಿಸಿರುವ ಆರೋಪ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ಆ ಬಳಿಕ ಮತ್ತೆ ಸಚಿವ ಆಗುತ್ತೇನೆ ಎಂದು ರಮೇಶ್‌ ಅವರು ಸಿಎಂ ಬಿಎಸ್​ವೈ ಅವರಿಗೆ ಹೇಳಿದ್ದಾರೆ' ಎಂದು ಬಲ ಮೂಲಗಳು ತಿಳಿಸಿವೆ.


ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪದ ಮೇಲೆ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರದ ಕಬ್ಬನ್ ಪಾರ್ಕ್ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ದಾಖಲಾಗಿದೆ.

Next Story

RELATED STORIES