Top

ಬಸವಣ್ಣನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ

ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಇಂದು ಅವರ ಪ್ರತಿಮೆ ಉದ್ಘಾಟನೆ ಮಾಡಲಾಗಿದೆ

ಬಸವಣ್ಣನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ
X

ಬೆಂಗಳೂರು: ಭಕ್ತಿಭಾವದಿಂದ ಒಟ್ಟಾಗಿ ಸೇರಿ ಅಶ್ವರೂಢ ಬಸವೇಶ್ವರ ಪ್ರತಿಮೆ ಉದ್ಘಾಟನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ನಗರದಲ್ಲಿ ಬಸವಣ್ಣನವರ ಪ್ರತಿಮೆ ಉದ್ಘಾಟನೆ ಮಾಡಿದ ಬಳಿ ಮಾತನಾಡಿದ ಅವರು, ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಇಂದು ಅವರ ಪ್ರತಿಮೆ ಉದ್ಘಾಟನೆ ಮಾಡಲಾಗಿದೆ ಎಂದರು.

ಬಸವಣ್ಣನವರ ಚಿಂತನೆಗಳನ್ನು ನೆನಪಿನಲ್ಲಿಡಲು ಇದು ಸಹಕಾರಿ ಆಗಲಿದೆ. ಜನರಿಗೆ ಅತ್ಯುತ್ತಮ ಜೀವನ ಕಲಿಸಿಕೊಟ್ಟವರು ಬಸವಣ್ಣನವರು. ಆದರ್ಶ ವ್ಯಕ್ತಿ ಆಗಿ ಎಲ್ಲರ ಮನಸ್ಸಲ್ಲೂ ನೆಲೆಸಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ ಎಂದು ಅವರು ಬಸವಣ್ಣನವರನ್ನು ಸ್ಮರಿಸಿದ್ದಾರೆ.

ಸದ್ಯ ಪ್ರತಿಮೆ ಉದ್ಘಾಟನೆ ವೇಳೆ 1.5 ಕೋಟಿ ವೆಚ್ಚದಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿದೆ. ಬಸವಣ್ಣನವರ ಸಮಾನತೆಯ ಸಮಾಜ ನಿರ್ಮಿಸುವಲ್ಲಿ ನಾವೆಲ್ಲರೂ ಮುಂದೋಗೋಣ. ಬಸವ ಸಮಿತಿಯೇ ಇದನ್ನೆಲ್ಲಾ ನಿರ್ವಹಣೆ ಮಾಡಲಿದೆ ಎಂದು ಸಿಎಂ ಬಿಎಸ್​ವೈ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Next Story

RELATED STORIES