Top

ಅವಕಾಶ ಸಿಕ್ಕಿದರೆ ಖಂಡಿತಾ ಬಿಗ್​ಬಾಸ್ ಮನೆಗೆ ಹೋಗುತ್ತೇನೆ - ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್​

ಅವಕಾಶ ಸಿಕ್ಕಿದರೆ ಖಂಡಿತಾ ಬಿಗ್​ಬಾಸ್ ಮನೆಗೆ ಹೋಗುತ್ತೇನೆ - ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್​
X

ಬೆಂಗಳೂರು: ನನಗೆ ಬಿಗ್​ಬಾಸ್​ ಸೀಸನ್ 6ಕ್ಕೆ ಆಹ್ವಾನ ಕೊಟ್ಟಿದ್ದರು, ಒಪ್ಪಿಕೊಂಡಿದ್ದೆ. ಆಗ ಆರೋಗ್ಯ ಸಮಸ್ಯೆಯಿಂದ ಹೋಗಲು ಆಗಿರಲಿಲ್ಲ ಎಂದು ವಿಧಾನಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ.

ಬಿಗ್​ಬಾಸ್​ನಲ್ಲಿ ಪಾಲ್ಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗ ಕೆಲವು ಸ್ನೇಹಿತರು ಹೋಗ್ತೀರಾ ಅಂತಾ ಹೇಳುತ್ತಿದ್ದಾರೆ. ನನಗೂ ಹೋಗಲು ಆಸೆ ಇತ್ತು. ನನಗೆ ಒಂದು ವೇದಿಕೆ ಸಿಕ್ಕಿದಂತಾಗುತ್ತದೆ ಅಂತಾ ಯೋಚನೆ ಮಾಡಿದ್ದೆ. ಚುನಾವಣೆಗಳು ಬಂದಿವೆ, ಅಲ್ಲಿ ಇಲ್ಲಿ ಜವಾಬ್ದಾರಿ ಹಾಕ್ತಾರೆ, ಹಾಗಾಗಿ ಹೋಗಲು ಸ್ವಲ್ಪ ಕಷ್ಟ ಆಗಬಹುದು. ಅವರು ವಿಶೇಷ ಆಹ್ವಾನಿತರಾಗಿ ಬನ್ನಿ ಅಂತಾ ಕರೆದರೆ ಮೂರ್ನಾಲ್ಕು ದಿನಕ್ಕೆ ಹೋಗಬಹುದು ಎಂದರು.

ಇನ್ನು ದೇಶದಲ್ಲಿ ಜನರಿಗೆ ಎಲ್ಲಾ ಅರ್ಥ ಆಗುತ್ತಿದ್ದರೂ ಜನರಿಗೆ ರಾಜಕಾರಣ ಅರ್ಥ ಆಗುತ್ತಿಲ್ಲ, ಆ ಮನೆಯಲ್ಲಿ ಯುವಕರು, ಸಿನಿಮಾದವರು, ಗಂಡು-ಮಕ್ಕಳು, ಹೆಣ್ಣು-ಮಕ್ಕಳು, ಸಿನಿಮಾದವರು ಇದ್ದಾರೆ. ಅಲ್ಲಿ ನಾನು ರಾಜಕಾರಣದ ಸ್ಪಾರ್ಕ್ ಹಚ್ಚಿಸಬಹುದು. ನಾನು ಅದನ್ನು ಅಲ್ಲಿ ಕ್ರಿಯೇಟ್ ಮಾಡಬಲ್ಲೆ, ಅವಕಾಶ ಸಿಕ್ಕಿದರೆ ಖಂಡಿತಾ ಬಿಗ್​ಬಾಸ್ ಮನೆಗೆ ಹೋಗುತ್ತೇನೆ ಎಂದು ಹೇಳಿದರು.

ವಿಧಾನಸಭೆಯಿಂದ ನಡೆಯುವ ಉಪಚುನಾವಣೆಯಲ್ಲಿ ಸ್ಫರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ದೆಹಲಿ ವರಿಷ್ಠರು, ರಾಜ್ಯದ ವರಿಷ್ಠರು ಮತ್ತು ಸಿಎಂ ಗಮನಕ್ಕೆ ತಂದಿದ್ದೇನೆ. ನನಗೆ ಇನ್ನೂ ಐದೂವರೆ ವರ್ಷ ಅವಧಿ ಇದೆ. ನನಗೆ ಸುಪ್ರೀಂಕೋರ್ಟ್ ಶಾಪ ವಿಮೋಚನೆ ಆಗಬೇಕಾದರೆ ನಾನು ಚುನಾವಣೆ ಮೂಲಕವೇ ಬರಬೇಕು. ಧರ್ಮೇಗೌಡರಿಂದ ಖಾಲಿಯಾದ ಸ್ಥಾನದ ಮೂಲಕ ನಾನು ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಬಂದರೆ ಶಾಪ ವಿಮೋಚನೆ ಆಗುತ್ತದೆ ಎಂದಿದ್ದಾರೆ.

ಸದ್ಯ ಸರ್ಕಾರದಲ್ಲಿ ಕೂಡಾ ಜವಾಬ್ದಾರಿಗಳನ್ನು ಕೊಟ್ಟರೆ ನಾನು ನಿರ್ವಹಿಸಬಲ್ಲೆ, ಈಗಾಗಲೇ ಸಾಕಷ್ಟು ಜವಾಬ್ದಾರಿ ನಿರ್ವಹಿಸಿದ್ದೇನೆ. ನಾನು ಮಂತ್ರಿಯಾಗಿದ್ದಾಗ ಸರ್ಕಾರಿ ಶಾಲೆಗಳಿಗೆ ಏಕಕಾಲಕ್ಕೆ ಕಾಂಪೌಂಡ್, ಶೌಚಾಲಯ, ಸೌಲಭ್ಯ ಕಲ್ಪಿಸಿದ್ದೆ. ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ಕೊರತೆ ಇರುವ ಬಗ್ಗೆ ಪತ್ರಿಕೆಗಳಲ್ಲಿ ನೋಡಿದ್ದೇನೆ. ಹಾಗಾಗಿ ನನಗೆ ಒಂದು ಜವಾಬ್ದಾರಿ ಕೊಡಿ, ಶಾಪ ವಿಮೋಚನೆ ಮಾಡಿ, ನನಗೆ ಬರೀ ಮೂರೂವರೆ ವರ್ಷ ಸಾಕು. ನನಗೆ ಮೂರೂವರೆ ವರ್ಷ ಕೊಟ್ಟು ಐದೂವರೆ ವರ್ಷ ಯಾರಿಗೆ ಬೇಕಾದರೂ ಕೊಡಿ. ಈಗ ಆಗಿರುವ ವ್ಯತ್ಯಾಸಗಳನ್ನು ದಯವಿಟ್ಟು ಸರಿ ಮಾಡಿ ಕೊಡಿ ಅಂತಾ ಕೇಳುತ್ತಿದ್ದೇನೆ. ಸರ್ಕಾರದಲ್ಲಿ ನಾನು ಕೆಲಸ ಮಾಡಬಲ್ಲೆ, I Can Do Wonder ಎಂದು ವಿಶ್ವಾಸದಿಂದ ನುಡಿದರು.

Next Story

RELATED STORIES