Top

COVID 19 Karnataka Updates: ಇಂದು ರಾಜ್ಯದಲ್ಲಿ 2,975 ಕೋವಿಡ್ 19 ಪತ್ತೆ

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,92,779ಕ್ಕೆ ಏರಿಕೆಯಾಗಿದೆ.

COVID 19 Karnataka Updates: ಇಂದು ರಾಜ್ಯದಲ್ಲಿ 2,975 ಕೋವಿಡ್ 19 ಪತ್ತೆ
X

ಬೆಂಗಳೂರು: ಇಂದು ರಾಜ್ಯದಲ್ಲಿ 2,975 ಕೋವಿಡ್ 19 ಪತ್ತೆಯಾಗಿರುವ ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 21 ಸೋಂಕಿತರು ಪ್ರಾಣಕಳೆದುಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸದ್ಯ ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,92,779ಕ್ಕೆ ಏರಿಕೆಯಾಗಿದೆ. ಈವರೆಗೆ 9,54,678 ಮಂದಿ ಗುಣಮುಖರಾಗಿದ್ದಾರೆ.

ಹೊಸ ಪ್ರಕರಣಗಳು ಸಂಖ್ಯೆ ದಿನದಿನೇ ಏರಿಕೆಯಾಗುತ್ತಿರುವ ಹಿನ್ನೆಲೆ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದೆ. 25,541 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 240 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಸೋಂಕಿತರಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 12,541ಕ್ಕೆ ತಲುಪಿದೆ.

Next Story

RELATED STORIES