ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆಯನ್ನು ಜಾರಿಗೆ ತಂದಿದೆ ಇದರಿಂದ ಬಡ ರೈತರ ಕುಟುಂಬಗಳು ಬೀದಿಗೆ ಬೀಳಲಿವೆ.

ಬೆಂಗಳೂರು: ರಾಜ್ಯ ಸರ್ಕಾರ ಭೂ ಸ್ವಾಧೀನ ಕಾಯ್ದೆಯನ್ನು ಜಾರಿಗೆ ತಂದಿದೆ ಇದರಿಂದ ಬಡ ರೈತರ ಕುಟುಂಬಗಳು ಬೀದಿಗೆ ಬೀಳಲಿವೆ. ಜಮೀನ್ದಾರಿ ಪದ್ಧತಿ ಅಸ್ಥಿತ್ವಕ್ಕೆ ಬರಲು ದಾರಿ ಮಾಡಿಕೊಟ್ಟಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಅಲ್ಲದೇ, ಈ ಕಾಯ್ದೆ ಬೆಂಗಳೂರು ಲ್ಯಾಂಡ್ ಮಾಫಿಯಾ ಹಿತಾಸಕ್ತಿಗೆ ಅನುಗುಣವಾಗಿದೆ. ರಿಯಲ್ ಎಸ್ಟೇಟ್ ಕುಳಗಳಿಗೆ ದಾರಿ ಮಾಡಿಕೊಡಲಿದೆ. ಕೆಐಎಡಿಬಿ 36 ಸಾವಿರ ಎಕರೆ ಅಭಿವೃದ್ಧಿಯಾಗದ ಭೂಮಿ ಹೊಂದಿದೆ ಇದನ್ನ ಕೈಗಾರಿಕಾ ಅಭಿವೃದ್ಧಿಗೆ ಬಳಸಿಕೊಳ್ಳಬಹುದಾಗಿದೆ ಇದನ್ನ ಬಿಟ್ಟು ರೈತರನ್ನ ಬೀದಿಗೆ ತಳ್ಳುವುದು ಸರಿಯಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.
ಇನ್ನು ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ನಾವು ತಂದಿದ್ದೆವು. ಇದು ಇಲ್ಲಿಯವರೆಗೆ ರೈತರ ರಕ್ಷಣೆಯನ್ನ ಮಾಡುತ್ತಿತ್ತು. ಆದರೆ, ಹೊಸ ತಿದ್ದುಪಡಿತದ್ವಿರುದ್ಧವಾಗಿದೆ ಇದರ ಬಗ್ಗೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಕಾಯ್ದೆಯನ್ನ ರದ್ಧುಪಡಿಸುವಂತೆ ಸೂಚಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಿಎಂ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.