Top

ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ - ಸಿಎಂ ಬಿಎಸ್​ ಯಡಿಯೂರಪ್ಪ

ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ.

ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ - ಸಿಎಂ ಬಿಎಸ್​ ಯಡಿಯೂರಪ್ಪ
X

ಮೈಸೂರು: ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ, ಅಕ್ರಮವಾಗಿದ್ದರೆ ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರು ಶನಿವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಆದರೆ, ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ. ಆದರೆ, ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಇನ್ನು ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶಿವಮೊಗ್ಗದಲ್ಲಿ ಸ್ಪೋಟದಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಮನೆಗಳಿಗೂಹಾನಿಯಾಗಿದೆ ಅಂತ ಗೊತ್ತಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಸದ್ಯ ಕೋವಿಡ್ ಕಾರಣದಿಂದ ಸಂಪನ್ಮೂಲ ಕೊರತೆ ಉಂಟಾಗಿದೆ. ಹೀಗಾಗಿ ಸಹಜವಾಗಿಯೇ ಬಜೆಟ್ ಗಾತ್ರ ಕಳೆದ ಬಾರಿಗಿಂತ ಕಡಿಮೆ ಇರಲಿದೆ ಎಂದು ಮೈಸೂರಿನಲ್ಲಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.

Next Story

RELATED STORIES