Top

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ - ಸಚಿವ ಎಸ್​ ಸುರೇಶ್​ ಕುಮಾರ್​ ಸ್ಪಷ್ಟನೆ

ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ - ಸಚಿವ ಎಸ್​ ಸುರೇಶ್​ ಕುಮಾರ್​ ಸ್ಪಷ್ಟನೆ
X

ಬೆಂಗಳೂರು: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯೂ ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ತಮ್ಮ ಫೇಸ್​​ಬುಕ್​ ಖಾತೆ ವಾಲ್​ನಲ್ಲಿ ಬರೆದುಕೊಂಡಿರುವ ಅವರು, ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದಿದ್ದಾರೆ.

ಇನ್ನು ನಾನೀಗ ಸಧ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಎಸ್​ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Next Story

RELATED STORIES