Top

ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ವಿಧಿವಶ

ತಡರಾತ್ರಿ ಹೃದಯಾಘಾತ ಆದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧರಾದರು.

ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ವಿಧಿವಶ
X

ಬೆಂಗಳೂರು: ಖ್ಯಾತ ಹಿರಿಯ ಪತ್ರಕರ್ತ, ಹಾಯ್‌ ಬೆಂಗಳೂರು ಟ್ಯಾಬ್ಲಾಯ್ಡ್‌ನ ಪ್ರಧಾನ ಸಂಪಾದಕ ರವಿ ಬೆಳಗೆರೆ ಅವರು(62) ಹೃದಯಾಘಾತದಿಂದ ಶುಕ್ರವಾರ ಮುಂಜಾನೆ ವಿಧಿವಶರಾಗಿದ್ದಾರೆ.

ರವಿ ಬೆಳಗೆರೆ ಅವರು ಮಾರ್ಚ್​ 15, 1958ರಲ್ಲಿ ಬಳ್ಳಾರಿಯಲ್ಲಿ ಜನಿಸಿದರು. ಎಂ.ಎ ಮಾಡಿದ್ದ ಅವರು ಪತ್ರಿಕೋದ್ಯಮದ ಕಡೆಗೆ ಹೊರಳಿದರು. ಸಾಹಿತ್ಯ, ಕ್ರೈಂ ಕಾರ್ಯಕ್ರಮಗಳ ನಿರೂಪಣೆ, ಓ ಮನಸೇ ಮೂಲಕ ಜನಪ್ರಿಯರಾದರು. ಅವರು ಬೆಂಗಳೂರಿನಲ್ಲಿ ಪ್ರಾರ್ಥನಾ ಶಾಲೆ ಕಟ್ಟಿ ಬೆಳೆಸಿದ್ದಾರೆ.

1995ರಲ್ಲಿ ಹಾಯ್‌ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡಂತೆ ಅಂದಾಜು 70 ಪುಸ್ತಕಗಳನ್ನು ಪ್ರಕಟಗೊಂಡಿವೆ.

ಇನ್ನು ಇವರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳು ದೊರೆತ್ತಿದ್ದು, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ ಸಂದಿವೆ.

ರವಿ ಬೆಳಗೆರೆ ಅವರಿಗೆ ಇಬ್ಬರು ಪತ್ನಿಯರು, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಇದ್ದಾರೆ. ತಡರಾತ್ರಿ ಹೃದಯಾಘಾತ ಆದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧರಾದರು.

Next Story

RELATED STORIES