Top

ರಾಜಧಾನಿಯಲ್ಲಿ ಇಂದು ಸಹ ರೈತರು, ಸಾರಿಗೆ ನೌಕರರಿಂದ ಪ್ರತಿಭಟನೆ

ಈ ನಡುವೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಸಹ ಪ್ರತಿಭಟನೆ ನಡೆಸುತ್ತಿದ್ದಾರೆ

ರಾಜಧಾನಿಯಲ್ಲಿ ಇಂದು ಸಹ ರೈತರು, ಸಾರಿಗೆ ನೌಕರರಿಂದ ಪ್ರತಿಭಟನೆ
X

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸುಧಾರಣೆ ಕಾಯ್ದೆ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿರುವ ರೈತರು ಇಂದು ಸಹ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಇಂದು ಮಧ್ಯಾಹ್ನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದು, ಹೆಚ್ಚಿನ ಸಂಖ್ಯೆಯ ರೈತರು ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ರಾಜ್ಯ ರೈತ ಸಂಘ ಹಾಗೂ ರಾಜ್ಯ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ರೈತರ ಬೃಹತ್ ಜಾಥಾ ಆರಂಭವಾಗಲಿದ್ದು, ಸ್ವಾತಂತ್ರ್ಯ ಉದ್ಯಾನವನ, ಕೆ.ಆರ್ ಸರ್ಕಲ್ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ಈ ನಡುವೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಸಹ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಹಾಗೂ ಬಿಎಂಟಿಸಿ ಸಿಬ್ಬಂದಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Next Story

RELATED STORIES