Top

ಶಿವಮೊಗ್ಗ ಸ್ಟೋಟ ಪ್ರಕರಣ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದೆ.

ಶಿವಮೊಗ್ಗ ಸ್ಟೋಟ ಪ್ರಕರಣ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ
X

ಬೆಂಗಳೂರು: ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇಂದು ತಮ್ಮ ಟ್ವಟಿರ್​ ಖಾತೆ ಬರೆದುಕೊಂಡಿರುವ ಅವರು, ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಸಹ ಸೂಚಿಸಿದ್ದಾರೆ.

ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಿಎಂ ಬಿಎಸ್​ವೈ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಜಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.


Next Story

RELATED STORIES