ಜನವರಿ 1 ರಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭ ಖಚಿತ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿದೆ.

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ನಾಳೆ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಪರಿಸ್ಥಿತಿಗಳನ್ನು ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ, ಪರಿಷ್ಕೃತ ಮಾದರಿಯ ವಿದ್ಯಾಗಮ ಯೋಜನೆ ಜಾರಿ ವಿಷಯಗಳ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ.
ಶಾಲಾ-ಕಾಲೇಜು ತರಗತಿ ನಡೆಯುವ ವೇಳೆ ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಜನವರಿ 1ರಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುವುದು ಬಹುತೇಕ ಖಚಿತವಾಗಿದೆ.