Top

ಗೋಕಾಕ್​: ರಮೇಶ್ ಜಾರಕಿಹೊಳಿ ರಾಜೀನಾಮೆ ವಿರೋಧಿಸಿ ಬೆಂಬಲಿಗರಿಂದ ಪ್ರತಿಭಟನೆ

ಗೋಕಾಕ್​: ರಮೇಶ್ ಜಾರಕಿಹೊಳಿ ರಾಜೀನಾಮೆ ವಿರೋಧಿಸಿ ಬೆಂಬೆಗರಿಂದ ಪ್ರತಿಭಟನೆ

ಗೋಕಾಕ್​: ರಮೇಶ್ ಜಾರಕಿಹೊಳಿ ರಾಜೀನಾಮೆ ವಿರೋಧಿಸಿ ಬೆಂಬಲಿಗರಿಂದ ಪ್ರತಿಭಟನೆ
X

ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ಬಾಂಬ್ ವಿಚಾರವಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಹುಚ್ಚಾಟ ಪ್ರದರ್ಶಿಸಿದ್ದಾರೆ. ಗೋಕಾಕನಲ್ಲಿ ಸಾಹುಕಾರ್ ಬೆಂಬಲಿಗರು ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆ ಯತ್ನಿಸಿದರು, ಹಾಲಿನ ಅಭಿಷೇಕ ಮಾಡಿ ಬಲವಂತವಾಗಿ ಗೋಕಾಕ ಪಟ್ಟಣ ಬಂದ್ ಮಾಡಿ ಹುಚ್ಚಾಟ ಪ್ರದರ್ಶಿಸಿದ್ದಾರೆ.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಜಲಸಂಪನ್ಮೂಲ ಮಂತ್ರಿ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಾಜ್ಯರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಬೆಳಗ್ಗೆಯಿಂದಲೇ ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದ ಗೋಕಾಕನಲ್ಲಿ ಜೆಡಿಎಸ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಚಡ್ಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಕುಂದಾನಗರಿ ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಂಬಲಿಗರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್, ಜೆಡಿಎಸ್​ ರಾಜೀನಾಮೆಗೆ ಆಗ್ರಹಿಸಿದರು. ಮಧ್ಯಾಹ್ನ ಆಗುತ್ತಿದ್ದಂತೆ ರಮೇಶ್ ಜಾರಕಿಹೊಳಿ ನೈತಿಕ ಹೊಣೆಹೊತ್ತು ಮಂತ್ರಿಗಿರಿಗೆ ರಾಜೀನಾಮೆ ನೀಡಿದರು. ಇದರಿಂದ ಕೆರಳಿದ ಸಾಹುಕಾರ್ ಬೆಂಬಲಿಗರು ಗೋಕಾಕನ ಬಸವೇಶ್ವರ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದರು.

ಈ ವೇಳೆ ರೊಚ್ಚಿಗೆದ್ದ ನಾಲ್ವರು ಅಭಿಮಾನಿಗಳು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದರು. ತಕ್ಷಣವೇ ಸ್ಥಳದಲ್ಲಿ ಇದ್ದ ಪೊಲೀಸರು ಆಗಬಹುದಾದ ಅನಾಹುತವನ್ನ ತಪ್ಪಿಸಿದ್ರು. ಅಲ್ಲದೇ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡವರನ್ನ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.

ಇನ್ನೂ ಗೋಕಾಕನ ಬಸವೇಶ್ವರ ಸರ್ಕಲ್​ನಲ್ಲಿ ಟಾಯರಗೆ ಬೆಂಕಿ ರಮೇಶ್ ಜಾರಕಿಹೊಳಿ ಪರ ಘೋಷಣೆ ಕೂಗಿದರು. ಆ ಬಳಿಕ ರಮೇಶ್ ಜಾರಕಿಹೊಳಿ ಬೆಂಬಲಿಗರು ಗುಂಪು ಗುಂಪಾಗಿ ಗೋಕಾಕ್​ ಪಟ್ಟಣದ ಮಾರುಕಟ್ಟೆಯನ್ನ ಬಲವಂತವಾಗಿ ಬಂದ್ ಮಾಡಿದರು. ತರಕಾರಿ ಮಾರುಕಟ್ಟೆ, ಬೀದಿ ವ್ಯಾಪಾರಸ್ಥರು, ಅಂಗಡಿಮುಂಗಟ್ಟುಗಳನ್ನ ಬಲವಂತವಾಗಿ ಬಂದ್ ಮಾಡಿ ಆಕ್ರೋಶ ಹೊರಹಾಕಿದರು.

ಇನ್ನೊಂದೆಡೆಗೆ ಜಾರಕಿಹೊಳಿ ಬೆಂಬಲಿಗರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಅಲ್ಲದೆ ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ್ ಮಾಡುವ ಮೂಲಕ ಅಭಿಮಾನಿಗಳು ಅವರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ ರಾಜೀನಾಮೆ ಅಂಗೀಕರಿಸಿದ್ರೆ ಬೆಳಗಾವಿ ಜಿಲ್ಲೆ ಬಂದ್ ಮಾಡುವುದಾಗಿ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಜಾರಕಿಹೊಳಿ ಕುಟುಂಬಕ್ಕೆ ಮುಜುಗರ ತಂದಿದೆ. ಹೀಗಾಗಿಯೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಂದ ದೂರವೇ ಉಳಿದರು. ಹಾಗೇ ನೋಡಿದರೆ ಕಳೆದ 11 ವರ್ಷಗಳಿಂದ ಬೆಳಗಾವಿ ಜಿಲ್ಲೆಯನ್ನ ಜಾರಕಿಹೊಳಿ ಕುಟುಂಬ ಹಿಡಿತದಲ್ಲಿ ಇಟ್ಟುಕೊಂಡಿತ್ತು. ಮೊದಲಿಗೆ ಸತೀಶ್ ಜಾರಕಿಹೊಳಿ, ಆ ಬಳಿಕ ರಮೇಶ್ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಹೀಗಾಗಿ ರಮೇಶ್ ಪ್ರಕರಣದಲ್ಲಿ ಸತೀಶ್ ಜಾರಕಿಹೊಳಿ ಮೌನವಾಗಿ ಉಳಿದಿದ್ದಾರೆ.

Next Story

RELATED STORIES