Top

'ವಿದ್ಯಾಗಮ ಕಾರ್ಯಕ್ರಮ' ತಾತ್ಕಾಲಿಕವಾಗಿ ಸ್ಥಗಿತ - ಶಿಕ್ಷಣ ಸಚಿವ ಸುರೇಶ್​ ಕುಮಾರ್​

ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ

ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತ - ಶಿಕ್ಷಣ ಸಚಿವ ಸುರೇಶ್​ ಕುಮಾರ್​
X

ಬೆಂಗಳೂರು: ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್​ ಸುರೇಶ್​ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ತಮ್ಮ ಫೇಸ್​ಬುಕ್​ ವಾಲ್​ನಲ್ಲಿ ಬರೆದುಕೊಂಡಿರುವ ಅವರು, ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ ಎಂದಿದ್ದಾರೆ.

ಸದ್ಯ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಎಸ್​ ಸುರೇಶ್​ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

Next Story

RELATED STORIES