Top

ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು - ಮಾಜಿ ಸಿಎಂ ಹೆಚ್ಡಿಕೆ ಆಗ್ರಹ

''ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,'' ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ

ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು - ಮಾಜಿ ಸಿಎಂ ಹೆಚ್ಡಿಕೆ ಆಗ್ರಹ
X

ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟ್​ ಮಾಡಿದ್ದಾರೆ.

ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಟಿಕಾಯತ್​ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು(?) ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ''ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,'' ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಹೆಚ್ಡಿಕೆ ಅವರು ಆಗ್ರಹಿಸಿದ್ದಾರೆ.

Next Story

RELATED STORIES