Top

ಗೋಹತ್ಯೆ ನಿಷೇಧ ಮಸೂದೆ-2020 ಅನ್ನು ಜೆಡಿಎಸ್ ಸಂಪೂರ್ಣವಾಗಿ​ ವಿರೋಧಿಸುತ್ತದೆ - ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

2010ರಂತೆ ಈಗಲೂ ಸಹ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ

ಗೋಹತ್ಯೆ ನಿಷೇಧ ಮಸೂದೆ-2020 ಅನ್ನು ಜೆಡಿಎಸ್ ಸಂಪೂರ್ಣವಾಗಿ​ ವಿರೋಧಿಸುತ್ತದೆ - ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
X

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಮಂಗಳವಾರ ಮಂಡನೆ ಆಗಲಿರುವ ಗೋಹತ್ಯೆ ನಿಷೇಧ ಮಸೂದೆ-2020 ಅನ್ನು ಜೆಡಿಎಸ್​ ವಿರೋಧಿಸುವುದಾಗಿ ಪ್ರಕಟಿಸಿದೆ.


ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಜೆಡಿಎಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ ದೇವೇಗೌಡ ಅವರು, ಬಿಜೆಪಿ ಸರ್ಕಾರ ಮಂಡಿಸುತ್ತಿರುವ ಮಸೂದೆಯು ಜನರ ಬದುಕನ್ನು ಅಲ್ಲೋಲ-ಕಲ್ಲೋಲ ಮಾಡಲಿದೆ. ಶಾಂತಿಯನ್ನು ಹಾಳು ಮಾಡಲಿದೆ. ಆದ್ದರಿಂದ ನಮ್ಮ ಪಕ್ಷ ಸಂಪೂರ್ಣವಾಗಿ ಈ ಮಸೂದೆಯನ್ನು ವಿರೋಧಿಸಲಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ-1964 ಜಾರಿಯಲ್ಲಿದೆ. 2010ರಲ್ಲೂ ಕಾಯ್ದೆಯಲ್ಲಿ‌ ಬದಲಾವಣೆ ಮಾಡಲು ಹಿಂದಿನ ಬಿಜೆಪಿ ಸರ್ಕಾರ ಯತ್ನಿಸಿತ್ತು.‌ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಜೊತೆಯಾಗಿ ವಿರೋಧಿಸಿದ್ದವು. ತಾವು ರಾಜ್ಯಪಾಲರು ಮತ್ತು ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ‌ ಒತ್ತಾಯಿಸಿದ ಬಳಿಕ ಸ್ಪಷ್ಟನೆ ಕೇಳಿದ್ದರು. ಆ ಬಳಿಕ ಸರ್ಕಾರದ ನೇತೃತ್ವ ಬದಲಾಗಿದ್ದರಿಂದ ಹಳೆಯ ಕಾಯ್ದೆಯೇ ಜಾರಿಯಲ್ಲಿ ಉಳಿದಿದೆ ಎಂದು ಹೇಳಿದ್ದಾರೆ.

2010ರಲ್ಲಿ ವಿರೋಧಿಸಿದಂತೆ ಈಗಲೂ ಸಹ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. 1964ರ ಕಾಯ್ದೆಯಲ್ಲೇ ಗೋಹತ್ಯೆ ತಡೆಗೆ ಸಾಕಷ್ಟು ಅವಕಾಶಗಳಿವೆ ಎಂದಿದ್ದಾರೆ.

Next Story

RELATED STORIES