Top

ಜೆಡಿಎಸ್​ನವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ - ಸಿದ್ದರಾಮಯ್ಯ

ಈಶ್ವರಪ್ಪ ಯಾರು(?) ನನಗೆ ಈಶ್ವರಪ್ಪ ಸರ್ಟಿಫಿಕೇಟ್ ಬೇಕಾಗಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ

ಜೆಡಿಎಸ್​ನವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ - ಸಿದ್ದರಾಮಯ್ಯ
X

ಹುಬ್ಬಳ್ಳಿ: ಜೆಡಿಎಸ್​ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ, ಆ ಪಕ್ಷದವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಕೊರೆತೆಯಿಲ್ಲ. ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಹಿಂದ್ ಸಮಾವೇಶ ಮಾಡಲ್ಲ, ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ, ಹೋರಾಟದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಕುರುಬರಿಗೆ ಎಸ್​.ಟಿ( ಪರಿಶಿಷ್ಟ ಪಂಗಡ) ಮೀಸಲು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕುಲಶಾಸ್ತ್ರ ಅಧ್ಯಯನದ ವರದಿ ಬಂದಿಲ್ಲ, ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ. ನಾನು ಸಿಎಂ ಆಗಿದ್ದ ವೇಳೆ ನಾಲ್ಕು ಜಿಲ್ಲೆಗಳಲ್ಲಿ ಕುರುಬರನ್ನ ಎಸ್.​ಟಿಗೆ ಸೇರಿಸಬೇಕು ಅಂತಾ ಆದೇಶ ಮಾಡಿದ್ದೆ ಎಂದರು.

ಎಸ್.ಟಿ ಮೀಸಲು ಹೋರಾಟದಲ್ಲಿ ರಾಜಕೀಯ ಮಾಡಲ್ಲ. ಇದೂ ಆರ್​ಆರ್​ಎಸ್​ ಪ್ರೇರಿತ ಹೋರಾಟ. ಕೆ.ಎಸ್​ ಈಶ್ವರಪ್ಪರನ್ನ ಆರ್​ಆರ್​ಆರ್​ನವರು ಎತ್ತಿ ಕಟ್ಟಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಏನೂ ಸಾಧನೆ ಮಾಡಿಲ್ಲ ಅಂತಾ ಸಚಿವ ಈಶ್ವರಪ್ಪ ಟೀಕೆ ವಿಷಯದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಸಿಎಂ ಆಗಿದ್ದಾಗ ಎನೂ ಅಭಿವೃದ್ಧಿ ಮಾಡಿದ್ದೇನೆ ಅಂತ ರಾಜ್ಯದ ಜನರಿಗೆ ಗೊತ್ತಿದೆ. ಈಶ್ವರಪ್ಪ ಯಾರು(?) ನನಗೆ ಈಶ್ವರಪ್ಪ ಸರ್ಟಿಫಿಕೇಟ್ ಬೇಕಾಗಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

Next Story

RELATED STORIES