Top

ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್​ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ - ಜಿಟಿಡಿ

ಜನ ಯಾರ ಪರವಾಗಿದ್ದಾರೆ ಎಂಬುದನ್ನು ಮೈಮುಲ್ ಚುನಾವಣೆ ಫಲಿತಾಂಶ ನಿರ್ಣಯಿಸಲಿದೆ

ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್​ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ - ಜಿಟಿಡಿ
X

ಮೈಸೂರು: ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ(?) ಸಾ.ರಾ. ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್​ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ ಎಂದು ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿ, ನಾನು ಈಗಲೂ ಜೆಡಿಎಸ್​ನಲ್ಲೇ ಇದ್ದೇನೆ. ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಸಾಲಿನಲ್ಲೇ ನನಗೆ ಕುರ್ಚಿ ಇದೆ. ನಾನು ಈಗಲೂ ಜೆಡಿಎಸ್ ಶಾಸಕರ ಜೊತೆಯಲ್ಲೇ ಕುಳಿತುಕೊಳ್ಳುತ್ತಿದ್ದೇನೆ. ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್​ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ ಎಂದು ಅವರ ಸಂಕಟವನ್ನು ತೋಡಿಕೊಂಡಿದ್ದಾರೆ.

ಇನ್ನು ಕುಮಾರಸ್ವಾಮಿ ಅವರು ಯಾರ್ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್. ಡಿ. ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ. ದೇವೇಗೌಡ ಎನ್ನುವ ಆಲದ ಮರವನ್ನು ಬುಡಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದರು ಎಂದಿದ್ದಾರೆ.

ಸದ್ಯ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟಿಲ್ಲ. ನಾನು ಮನಸ್ಸು ಮಾಡಿದ್ದಾರೆ ಶಾಶ್ವತವಾಗಿ ಮೈಮುಲ್ ಅಧ್ಯಕ್ಷನಾಗಿರುತ್ತಿದ್ದೆ. ಯಾವ ಕಾಲದಲ್ಲೋ ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತಿದ್ದೆ. ನನ್ನ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿದಾಗ ಕುಮಾರಸ್ವಾಮಿ ಸಹಕಾರ ಕೊಡಲಿಲ್ಲ. ಸಾ.ರಾ. ಮಹೇಶ್ ಮಾತು ಕೇಳಿಕೊಂಡು ಪ್ರತಿಸ್ಪರ್ಧಿ ಚಂದ್ರಶೇಖರ್ ಪರವಾಗಿ ಮತಯಾಚನೆ ಮಾಡಿದರು. ಜನರ ಆಶೀರ್ವಾದದಿಂದ ನನ್ನ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆಗಿದ್ದಾನೆ. ಜನ ಯಾರ ಪರವಾಗಿದ್ದಾರೆ ಎಂಬುದನ್ನು ಮೈಮುಲ್ ಚುನಾವಣೆ ಫಲಿತಾಂಶ ನಿರ್ಣಯಿಸಲಿದೆ ಎಂದು ಮಾತನಾಡಿದ್ದಾರೆ.

Next Story

RELATED STORIES