Top

ದೀಪಾವಳಿಯಲ್ಲಿ ಪಟಾಕಿ ನಿಷೇಧ ಸದ್ಯದಲ್ಲೇ ಸರ್ಕಾರದಿಂದ ಅಧಿಕೃತ ಘೋಷಣೆ - ಸಿಎಂ ಬಿಎಸ್​ವೈ

ನಾನು ಹೇಳಬೇಕಾದರೆ ನೂರಾರು ಬಾರಿ ಲೆಕ್ಕಾಚಾರ ಹಾಕಿನೇ ಹೇಳೋದು ಇದುವರೆಗೂ ನಾನು ಹೇಳಿದ್ದು ಸುಳ್ಳಾಗಿಲ್ಲ

ದೀಪಾವಳಿಯಲ್ಲಿ ಪಟಾಕಿ ನಿಷೇಧ ಸದ್ಯದಲ್ಲೇ ಸರ್ಕಾರದಿಂದ ಅಧಿಕೃತ ಘೋಷಣೆ - ಸಿಎಂ ಬಿಎಸ್​ವೈ
X

ಬೆಂಗಳೂರು: ರಾಜ್ಯದ 150 ಸರ್ಕಾರಿ ಐಟಿಐಗಳನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆಗೆ ನಿರ್ವಹಣೆಗೆ ವಹಿಸುವ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸರ್ಕಾರ ಮತ್ತು ಕೈಗಾರಿಕೋದ್ಯಮದ ಸಹಭಾಗಿತ್ವದಲ್ಲಿ ಕೈಗೊಂಡಿರುವ ಬಹುದೊಡ್ಡ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆಂದು ಗುರುತಿಸಲ್ಪಟ್ಟು ಸುಮಾರು 9,773 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂಮಿಯ ಹಕ್ಕನ್ನು ದಾಖಲೆ ಮಾಡುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ.

ಇನ್ನು ದೀಪಾವಳಿಯಲ್ಲಿ ಪಟಾಕಿ ನಿಷೇಧದ ತೀರ್ಮಾನ ಮಾಡಿದ್ದೇವೆ. ಸದ್ಯದಲ್ಲೇ ಅಧೀಕೃತ ಆದೇಶ ಹೊರಡಿಸಲಾಗುತ್ತದೆ ಎಂದಿದ್ದಾರೆ.

ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನೂರಕ್ಕೆ ನೂರು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ನಾನು ಹೇಳಬೇಕಾದರೆ ನೂರಾರು ಬಾರಿ ಲೆಕ್ಕಾಚಾರ ಹಾಕಿನೇ ಹೇಳೋದು ಇದುವರೆಗೂ ನಾನು ಹೇಳಿದ್ದು ಸುಳ್ಳಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆ ಫಲಿತಾಂಶ ಬರೋದನ್ನೇ ಕಾಯುತ್ತಿದ್ದೇನೆ. ಸಾಧ್ಯವಾದರೆ ದೂರವಾಣಿ ಮೂಲಕವೇ ವರಿಷ್ಟರ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಚುನಾವಣೆ ಫಲಿತಾಂಶದ ಬಳಿಕ ನವೆಂಬರ್ 11ರಂದು ದೆಹಲಿಗೆ ತೆರಳುತ್ತೇನೆ. ವರಿಷ್ಟರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

Next Story

RELATED STORIES