Top

ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸಿ - ಸಿಎಂ ಬಿಎಸ್​ವೈ

ಮಾಸ್ಕ್, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನಕ್ರಮವಾಗಲಿ. ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸರ್ವಥಾ ಸಲ್ಲದು

ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸಿ - ಸಿಎಂ ಬಿಎಸ್​ವೈ
X

ಬೆಂಗಳೂರು: ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಆ ಮೂಲಕ ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ಸಿಎಂ ಟ್ವಿಟರ್​ನಲ್ಲಿ ಮನವಿ ಮಾಡಿರುವ ಅವರು, ಕೋವಿಡ್-19 ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ನಾಗರಿಕರ ಸಹಕಾರವಿಲ್ಲದೆ ಇದು ಯಶಸ್ವಿಯಾಗದು. ಮಾಸ್ಕ್ ಧಾರಣೆ, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನಕ್ರಮವಾಗಲಿ. ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸರ್ವಥಾ ಸಲ್ಲದು ಎಂದು ತಿಳಿಸಿದ್ದಾರೆ.

ಇನ್ನು ಹಿರಿಯ ನಾಗರಿಕರು, ಆರೋಗ್ಯ ಸಮಸ್ಯೆಯುಳ್ಳ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು. ತಪ್ಪದೇ ಲಸಿಕೆ ಪಡೆದುಕೊಳ್ಳಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಮುನ್ನೆಚ್ಚರಿಕೆಯ ಕ್ರಮಗಳ ಪಾಲನೆ ನಿರಂತರವಾಗಿ ಮುಂದುವರಿಯಲಿ ಎಂದಿದ್ದಾರೆ.

ಸದ್ಯ ಸಾರ್ವಜನಿಕ ಸ್ಥಳಗಳಲ್ಲಿ ಈ ಕ್ರಮಗಳನ್ನು ತಪ್ಪದೇ ಪಾಲಿಸೋಣ. ಆ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ. ಕೋವಿಡ್-19 ನಿಯಂತ್ರಿಸೋಣ. ಜೀವ-ಜೀವನೋಪಾಯಗಳ ಸಮತೋಲನ ಕಾಪಾಡುವ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸೋಣ, ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯೋಣ ಎಂದು ಸಿಎಂ ಬಿಎಸ್​ವೈ ಅವರು ಟ್ವಿಟ್​ ಮಾಡಿ ತಿಳಿಸಿದ್ದಾರೆ.

Next Story

RELATED STORIES