Top

ಕುಮಾರಸ್ವಾಮಿ ಸಿಎಂ ಆಗೋಕೆ ನಬಿಯವರೇ ಕಾರಣ - ಮಾಜಿ ಪ್ರಧಾನಿ ಹೆಚ್ಡಿಡಿ

ನನ್ನ ಶರೀರದಲ್ಲಿ ಶಕ್ತಿ ಇರೋವರೆಗೂ ನಾನು ಪಕ್ಷ ಕಟ್ಟುತ್ತೇನೆ

ಕುಮಾರಸ್ವಾಮಿ ಸಿಎಂ ಆಗೋಕೆ ನಬಿಯವರೇ ಕಾರಣ - ಮಾಜಿ ಪ್ರಧಾನಿ ಹೆಚ್ಡಿಡಿ
X

ರಾಯಚೂರು: ನಾಳೆ ಬೆಳಿಗ್ಗೆ ದೆಹಲಿಗೆ ತೆರಳುತ್ತೇನೆ. ಬಜೆಟ್ ಚರ್ಚೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​.ಡಿ ದೇವೇಗೌಡ ಅವರು ಬುಧವಾರ ಹೇಳಿದ್ದಾರೆ.

ರಾಯಚೂರಿನಲ್ಲಿಂದು ಮಾತನಾಡಿದ ಅವರು, 2023ರಲ್ಲಿ ವಿಧಾನಸಭೆ ಚುನಾವಣೆ ಬರಲಿದೆ. ಕುಮಾರಸ್ವಾಮಿ ಸರ್ಕಾರ ಬಿದ್ದಿತು. ಆದರೆ, ನಾನ್ಯಾರನ್ನೂ ನಿಂದನೆ ಮಾಡಿಲ್ಲ. ಪಕ್ಷ ಕಟ್ಟಲು ಸಂಪೂರ್ಣ ಶ್ರಮವಹಿಸುತ್ತೇನೆ. ಅಸ್ಥಿರತೆಗೆ ನಾನು ಅವಕಾಶ ನೀಡುವುದಿಲ್ಲ, ಜಾತ್ಯಾತೀತ ಜನತಾದಳದ ವರಿಷ್ಠನಾಗಿ ತೀರ್ಮಾನ ಮಾಡಿದ್ದೇನೆ. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಶಕ್ತಿ ಮೀರಿ ಪ್ರಯತ್ನ ಮಾಡಲಾಗುವುದು ಎಂದರು.

ಇನ್ನು ನಮ್ಮಲ್ಲಿಯೂ 38 ಜನ ಶಾಸಕರಿದ್ದಾರೆ. ನಾವು ಬಿಜೆಪಿ ಜೊತೆ ವಿಲೀನ ಆಗುತ್ತೇವೆ ಅಂತಾರೆ. ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ. ಸಿಎಂ ಆಗಬೇಕು ಅಂತ ಯಾರ ಮನೆಗೂ ಹೋಗಿಲ್ಲ. ಗುಲಾಂನಬಿ ಆಜಾದ್ ಬಂದು ಕೇಳಿದ್ದರು. ಕುಮಾರಸ್ವಾಮಿ ಸಿಎಂ ಆಗೋಕೆ ನಬಿಯವರೇ ಕಾರಣ. ನನ್ನ ಮಗನಿಗೆ ಎರಡು ಮೇಜರ್ ಸರ್ಜರಿ ಆಗಿದೆ ಅಂದೆ. ಆದರೂ ಅವರು ಹಠ ಬಿಡಲಿಲ್ಲ. ಸೋನಿಯಾ ಗಾಂಧಿ ಮಾತುಕತೆ ನಂತರ ಕುಮಾರಸ್ವಾಮಿ ಸಿಎಂ ಆದ್ರು. ಸಿಎಂ ಬಗ್ಗೆ ನಾನು ಯಾವುದೇ ಆರೋಪ ಮಾಡಲ್ಲ. ನನ್ನ ಶರೀರದಲ್ಲಿ ಶಕ್ತಿ ಇರೋವರೆಗೂ ನಾನು ಪಕ್ಷ ಕಟ್ಟುತ್ತೇನೆ. ಟಿಕೆಟ್ ನೀಡುವ ವಿಚಾರದಲ್ಲಿ ನಾವು ತಪ್ಪು ಮಾಡಿದ್ದೇವೆ ಎಂದು ಹೆಚ್ಡಿಡಿ ಅವರು ಮಾತನಾಡಿದ್ದಾರೆ.

ನಾಲ್ಕು ರಾಜ್ಯಗಳಲ್ಲಿ ಚುನಾವಣೆ ಹಿನ್ನೆಲೆ ತಮಿಳಯನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲ್ಲ ಎಂಬ ಭಾವನೆಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಧೈರ್ಯ ಮೆಚ್ಚುವಂತದ್ದು. ಈ ಬಾರಿ ಮಮತಾ ಮತ್ತೆ ಅಧಿಕಾರ ಪಡೆಯಬಹುದು. ಇಡೀ ಬಿಜೆಪಿ ಟೀಂ ಪಶ್ಚಿಮ ಬಂಗಾಳದಲ್ಲಿ ನೆಲೆಯೂರಿದೆ. ಸಚಿವರು, ಶಾಸಕರು ಪಕ್ಷ ಬಿಟ್ಟಿದ್ದಾರೆ. ಇದು ಅವರಿಗೆ ಸ್ವಲ್ಪ ಹಿನ್ನೆಡೆ ಆಗಬಹುದು. ಆದರೆ, 3ನೇ ಬಾರಿಯೂ ಮಮತಾ ಸಿಎಂ ಆಗಲಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರ ಪರ ಹೆಚ್ಡಿಡಿ ಬ್ಯಾಟಿಂಗ್ ಮಾಡಿದ್ದಾರೆ.

ಈ ಬಾರಿಯ ಉಪ ಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿ ಇಲ್ಲ. ಯಾವುದೇ ಅಭ್ಯರ್ಥಿಗಳನ್ನ ನಿಲ್ಲಿಸಲ್ಲ. ಮಸ್ಕಿ, ಸಿಂದಗಿ,ಬಸವ ಕಲ್ಯಾಣ ವಿಧಾನಸಭೆ. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ನಿಲ್ಲಿಸಲ್ಲ ಎಂದಿದ್ದಾರೆ.


Next Story

RELATED STORIES