Top

ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

  • ಸೆಪ್ಟೆಂಬರ್ 2 ಮತ್ತು 3ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ.
  • ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು ಭಾಗಗಳಲ್ಲಿ ಭಾರೀ ಮಳೆ.
  • ಸೆಪ್ಟೆಂಬರ್ 1 ರಿಂದ 3ರ ವರೆಗೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ.

ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
X

ಬೆಂಗಳೂರು: ಕಳೆದ 15 ದಿನಗಳಿಂದ ಸೈಲೆಂಟ್ ಆಗಿದ್ದ ಮಳೆರಾಯ ಈಗ ಮತ್ತೆ ಅಬ್ಬರಿಸಲು ಶುರುಮಾಡಿದ್ದಾನೆ. ಕೊರೊನಾ ನಡುವೆ ಮಳೆ ಆರ್ಭಟ ಮತ್ತೆ ಆರಂಭವಾಗಿದೆ. ಬೆಂಗಳೂರಿನಲ್ಲೂ ಮಳೆ ಮುನ್ಸೂಚನೆ ಇದ್ದು ಹೊರಗಡೆ ಓಡಾಡೋ ಜನರು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಹಾಗಿದ್ರೆ ಎಷ್ಟು ದಿನಗಳ ಕಾಲ ಎಲ್ಲೆಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.ಅನ್ನೋದರ

ರಾಜ್ಯ ಹವಾಮಾನ ಇಲಾಖೆ ರಾಜ್ಯಕ್ಕೆ ಮತ್ತೆ ಮಳೆ ಕಂಟಕ ಕಾದಿದೆ ಅನ್ನೊ ಮಾಹಿತಿಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇವತ್ತಿನಿಂದ ಸೆಪ್ಟೆಂಬರ್ 3ರ ವರೆಗೆ ಮಳೆಯಾಗಲಿದ್ದು, ಸೆಪ್ಟೆಂಬರ್ 2, ಹಾಗೂ 3 ರಂದು ಮಳೆ ಅಬ್ಬರಿಸಲಿದೆ ಅನ್ನೊ ಮಾಹಿತಿ ನೀಡಿದೆ.ಸೆಪ್ಟೆಂಬರ್ 2 ಮತ್ತು 3 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ. ಹೀಗಾಗಿ ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು, ಭಾಗಗಳಲ್ಲಿ ಮತ್ತೆ ಸೆಪ್ಟೆಂಬರ್ 2 ಮತ್ತು 3 ರಂದು ಭಾರಿ ಮಳೆಯಾಗಲಿದ್ದು ಆರೆಂಜ್ ಅರ್ಲಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇವತ್ತು ನಾಳೆ ಸಾಧಾರಣೆ ಮಳೆಯಾಗುವ ನಿರೀಕ್ಷೆ ಇದೆ ಅಂತ ತಿಳಿಸಿದ್ದಾರೆ.

ಇನ್ನೂ ಸೆಪ್ಟೆಂಬರ್ 2 ಮತ್ತು 3 ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಸೆಪ್ಟೆಂಬರ್ 1 ರಿಂದ 3ರ ವರೆಗೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಕೊಡಗು, ಹಾಸನ ಚಾಮರಾಜನಗರ , ಮೈಸೂರು , ಮಂಡ್ಯ , ರಾಮನಗರ , ಬೆಂಗಳೂರ ಚಿಕ್ಕಬಳ್ಳಾಪುರ ತುಮಕೂರ ಭಾರಿ ಮಳೆ ಸಾಧ್ಯತೆ ಇದೆ ಹೀಗಾಗಿ ಈ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.

ಸದ್ಯ ರಾಜ್ಯದಲ್ಲಿ ದಿನಕ್ಕೆ 8 ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗುತ್ತಿದ್ದರೆ ಇನ್ನೊಂದೆಡೆ ಮಳೆಯ ಆರ್ಭಟ ಕೂಡ ಹೆಚ್ಚಾಗಿದೆ. ನಿನ್ನೆ ಸುರಿದ ಮಳೆಯಿಂದಾಗಿ ನಗರದಲ್ಲಿ ಮರಗಳು ಧರೆಗುರುಳಿದ್ದು ಅಪಾಯವನ್ನು ಉಂಟುಮಾಡಿದೆ. ಹೀಗಾಗಿ ಜನರು ಎಚ್ಚರಿಕೆ ವಹಿಸೋದು ಅಗತ್ಯವಾಗಿದೆ.

Next Story

RELATED STORIES