Top

ಎರಡು ಗುಂಪುಗಳ ನಡುವೆ ಘರ್ಷಣೆ ಗುಂಪು ಚದುರಿಸಲು ಲಾಠಿ ಚಾಜ್​

ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಅನಧಿಕೃತವಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ.

Alert
X

ಬೆಳಗಾವಿ: ಕೆಲವು ಯುವಕರ ಗುಂಪಿನಿಂದ ಪ್ರಚೋದನ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಉದ್ರಿಕ್ತರ ಮೇಲೆ ಲಾಠಿ ಚಾರ್ಚ್ ಮಾಡಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಕೆ.ತ್ಯಾಗರಾಜನ್​ ಅವರು ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿಚಾರವಾಗಿ ಘಟನೆ ನಡೆದಿದೆ ಇದರಿಂದ ಶಿವಾಜಿ ವೃತ್ತದ ಹೆಸರಿಗೆ ಧಕ್ಕೆ ಆಗುತ್ತದೆ ಎನ್ನುವ ಆತಂಕದಿಂದ ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಈ ರೀತಿಯ ಯಾವುದೇ ವೃತ್ತದಲ್ಲಿ ಮಹಾನಾಯಕರ ಹೆಸರಿಗೆ ಧಕ್ಕೆ ಆಗಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

ನಗರದ ಆಯಾ ಕಟ್ಟಿನ ಸ್ಥಳದಲ್ಲಿ ಬೀಗಿ ಭದ್ರತೆ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಅನಧಿಕೃತವಾಗಿದೆ. ಈ ಬಗ್ಗೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ ಎಂದು ಬೆಳಗಾವಿ ಪೊಲೀಸ್​ ಆಯುಕ್ತ ಕೆ ತ್ಯಾಗರಾಜನ್ ಅವರು ಹೇಳಿದ್ದಾರೆ.

ಬೆಳಗಾವಿ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾನೆ ವಿಚಾರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ರಾಯಣ್ಣ ಅಭಿಮಾನಿಗಳು ಧ್ವಜ ಹಿಡಿದು ಬಂದಾಗ ಎರಡು ಗುಂಪು ಮಧ್ಯೆ ಕೂಗಾಟವಾಗಿತ್ತು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳದಲ್ಲಿ ಬೀಗಿನ ವಾತಾವರಣ ಉಂಟಾಗಿದೆ.

Next Story

RELATED STORIES