Top

ಬಳ್ಳಾರಿ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ - ಶಾಸಕ ಸೋಮಶೇಖರ್​ ರೆಡ್ಡಿ

ಯಾರಾದರೂ ಈ ಬಗ್ಗೆ ಹೋರಾಟ ಮಾಡಿದ್ರೆ ನಾನು ಬೆಂಬಲ ಕೊಡುತ್ತೇನೆ

X

ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜನೆ ಆದರೆ ಜಿಲ್ಲೆಯಲ್ಲಿ ಬಿಜೆಪಿ ಎರಡು ಹೊಳಾಗುತ್ತದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಜಯನಗರ(ಹೊಸಪೇಟೆ)ಯನ್ನು ಜಿಲ್ಲೆಯಾಗಿ ಘೋಷಣೆ ಮಾಡಲು ಹೊರಟ್ಟಿರುವ ಸರ್ಕಾರದ ತೀರ್ಮಾನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದಿದ್ದಾರೆ.

ಇನ್ನು ವಿಜಯನಗರ ಜಿಲ್ಲೆ ಬೇಡ ಬೇಡ ಅಂತಾ ಎಷ್ಟು ಬಾರಿ ಸಿಎಂ ಹೇಳಬೇಕು. ನಿಯೋಗ ತೆಗೆದುಕೊಂಡು ಹೋಗಿ ಹೇಳಿದ್ದೇವೆ ಇನ್ನಷ್ಟು ಬಾರಿ ಹೇಳಬೇಕು. ಡಿವೈಡ್ ಆಗಲೇ ಬೇಕು ಎಂದು ಡಿಸೈಡ್ ಆದರೆ ನಾವೇನು ಮಾಡಬೇಕು. ಮೊಂಡುತನಕ್ಕೆ ಬಿದ್ರೆ ನಾವೇನು ಮಾಡಬೇಕು. ನಾನಂತು ಇನ್ನೊಂದು ಬಾರಿ ಸಿಎಂಗೆ ಹೇಳಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಸದ್ಯ ಯಾರಾದರೂ ಈ ಬಗ್ಗೆ ಹೋರಾಟ ಮಾಡಿದ್ರೆ ನಾನು ಬೆಂಬಲ ಕೊಡುತ್ತೇನೆ. ಅಖಂಡ ಜಿಲ್ಲೆ ವಿಭಜನೆ ಮಾಡಿದೆ ಎಂದು ಬಿಜೆಪಿ ಜನರು ತಿರಸ್ಕಾರ ಮಾಡಲಿದ್ದಾರೆ ಎಂದು ಬಳ್ಳಾರಿ ಬಿಜೆಪಿ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.


Next Story

RELATED STORIES