ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಭೇಟಿ
ಸ್ಯಾಂಡಲ್ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಇಂದು ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ನೀಡಿ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.
X
Admin 24 Jan 2021 5:43 AM GMT
ಮೈಸೂರು: ಸ್ಯಾಂಡಲ್ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಇಂದು ನಾಡದೇವತೆ ಚಾಮುಂಡಿ ಬೆಟ್ಟಕ್ಕೆ ನೀಡಿ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಸುದೀಪ್ಗೆ ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸಾಥ್ ನೀಡಿದ್ದಾರೆ.
ಈ ವೇಳೆ ನಟ ಸುದೀಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದ್ದು, ದೇವಸ್ಥಾನದಲ್ಲಿ ನಿಶ್ಯಬ್ಧ ಕಾಪಾಡುವಂತೆ ತುಟಿ ಮೇಲೆ ಬೆರಳು ಇಟ್ಟು ಅಭಿಮಾನಿಗಳಿಗೆ ಸನ್ನೆ ಮಾಡಿದ್ದಾರೆ.
ಇನ್ನು ಮಾಸ್ಕ್ ಧರಿಸದೇ ಫೋಟೋ ತೆಗೆಸಿಕೊಳ್ಳಲು ಬಂದ ಅಭಿಮಾನಿಗೆ ಮತ್ತೊಬ್ಬ ಅಭಿಮಾನಿಯಿಂದ ಸುದೀಪ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.
ಸದ್ಯ ಸುದೀಪ್ ಅವರು ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರವನ್ನು ಅನೂಪ್ ಭಂಡಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ.
Next Story